ಕುಶಾಲನಗರ, ಮಾ. 18: ಕುಶಾಲನಗರವನ್ನು ಪ್ರತ್ಯೇಕ ತಾಲೂಕಾಗಿ ಘೋಷಿಸಬೇಕೆಂದು ಆಗ್ರಹಿಸಿ ಕುಶಾಲನಗರ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಸಾಮೂಹಿಕ ರಾಜಿನಾಮೆ ಸಲ್ಲಿಸುವ ನಿರ್ಣಯ ಕೈಗೊಂಡಿದೆ.ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷÀ ಎಂ.ಎಂ. ಚರಣ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ನಾಮನಿರ್ದೇಶಿತ ಸದಸ್ಯರು ಒಳಗೊಂಡಂತೆ ಸರ್ವ ಸದಸ್ಯರು ತಾಲೂಕುಕು ತಹಶೀಲ್ದಾರ್‍ಗೆ ರಾಜಿನಾಮೆ ಸಲ್ಲಿಸುವ ಮೂಲಕ ಸರಕಾರದ ಗಮನ ಸೆಳೆಯಲು ಸರ್ವಾನುಮತದ ಒಪ್ಪಿಗೆ ಸೂಚಿಸುವದರೊಂದಿಗೆ ಭಾನುವಾರ ಕುಶಾಲನಗರ ಪಟ್ಟಣ ಬಂದ್‍ಗೆ ಕರೆ ನೀಡಲಾಗಿದೆ.ಪಂಚಾಯಿತಿ ಉಪಾಧ್ಯಕ್ಷ ಟಿ.ಆರ್. ಶರವಣಕುಮಾರ್ ಮಾತನಾಡಿ, ಹಲವಾರು ವರ್ಷಗಳ ಹೋರಾಟದ ಹಿನ್ನೆಲೆಯಲ್ಲಿದ್ದರೂ ಕೂಡ ಕುಶಾಲನಗರ
(ಮೊದಲ ಪುಟದಿಂದ) ಪ್ರತ್ಯೇಕ ತಾಲೂಕಾಗಿ ಇದುವರೆಗೆ ಘೋಷಣೆಯಾಗಿಲ್ಲ. ಗ್ರಾಮ ಪಂಚಾಯಿತಿಯಷ್ಟಿರುವ ಕೇಂದ್ರಗಳನ್ನು ಕೂಡ ನೂತನ ತಾಲೂಕು ಪಟ್ಟಿಗೆ ಸೇರ್ಪಡೆಗೊಳಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪಕ್ಷಾತೀತವಾಗಿ ಕುಶಾಲನಗರ ಅಭಿವೃದ್ಧಿ ನಿಟ್ಟಿನಲ್ಲಿ ಆಡಳಿತ ಮಂಡಳಿ ರಾಜಿನಾಮೆ ಸಲ್ಲಿಸುವ ಮೂಲಕ ಹೋರಾಟ ಹಮ್ಮಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಪಂಚಾಯಿತಿ ಅಧ್ಯಕ್ಷÀ ಎಂ.ಎಂ. ಚರಣ್ ಮಾತನಾಡಿ, ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮ, ಪಟ್ಟಣಗಳ ನಾಗರೀಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕುಶಾಲನಗರ ಪ್ರತ್ಯೇಕ ತಾಲೂಕಾಗಿ ರೂಪುಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪಂಚಾಯಿತಿ ಆಡಳಿತ ಮಂಡಳಿ ಒಮ್ಮತದ ನಿರ್ಧಾರ ಮೂಲಕ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಹೋರಾಟ ಕೈಗೊಳ್ಳಲು ನಿರ್ಧರಿಸಿದೆ. ನಮ್ಮ ಯಾವದೇ ಒಂದು ಸರಕಾರ ಅಥವಾ ವ್ಯಕ್ತಿಯ ವಿರುದ್ಧವಾಗಿಲ್ಲ ಎಂದರು.
ಪಂಚಾಯಿತಿಯ ಕಾನೂನು ಸಲಹೆಗಾರ ಆರ್.ಕೆ. ನಾಗೇಂದ್ರಬಾಬು ಮಾತನಾಡಿ, ಕುಮಾರಸ್ವಾಮಿ ಸರಕಾರದ ಅವಧಿಯಲ್ಲಿ ಹೊಸ ತಾಲೂಕುಗಳ ಪಟ್ಟಿಯಲ್ಲಿ ಕುಶಾಲನಗರ 27ನೇ ಸ್ಥಾನದಲ್ಲಿತ್ತು. ಆದರೆ ಇಂದಿನ ಕಾಂಗ್ರೆಸ್ ಸರಕಾರದ ನೂತನ 49 ತಾಲೂಕುಗಳ ಪಟ್ಟಿಯಿಂದಲೂ ಕುಶಾಲನಗರವನ್ನು ಕೈಬಿಟ್ಟಿರುವದಕ್ಕೆ ರಾಜಕೀಯ ಇಚ್ಚಾಶಕ್ತಿಯ ಕೊರತೆಯೆ ಕಾರಣ ಎಂದರು.
ಪಂಚಾಯಿತಿ ಸದಸ್ಯರಾದ ಡಿ.ಕೆ. ತಿಮ್ಮಪ್ಪ, ಹೆಚ್.ಜೆ. ಕರಿಯಪ್ಪ, ರಶ್ಮಿ ಅಮೃತ್, ನಂಜುಂಡಸ್ವಾಮಿ, ಪ್ರಮೋದ್ ಮುತ್ತಪ್ಪ ಅವರು ಮಾತನಾಡಿ, ಪಟ್ಟಣದ ಅಭಿವೃದ್ಧಿ ನಿಟ್ಟಿನಲ್ಲಿ ರಾಜಕೀಯ ರಹಿತವಾಗಿ ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿದರು. ಸಭೆಯಲ್ಲಿ ಪಂಚಾಯಿತಿ ಸದಸ್ಯ ಹೆಚ್.ಡಿ. ಚಂದ್ರು ಗೈರು ಹಾಜರಿ ಕಂಡುಬಂತು. ಭಾನುವಾರ ¨ಳಿಗ್ಗೆ 6 ರಿಂದ ಸಂಜೆ ರ ತನಕ ಕುಶಾಲನಗರ ಬಂದ್‍ಗೆ ಪಂಚಾಯ್ತಿ ಕರೆ ನೀಡಿದೆ. ಬಂದ್‍ಗೆ ಕನ್ನಡ ಸಾಹಿತ್ಯ ಪರಿಷತ್ ಬೆಂಬಲ ಸೂಚಿಸುವದಾಗಿ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ತಿಳಿಸಿದ್ದಾರೆ.