ಶನಿವಾರಸಂತೆ, ಮಾ. 18: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕೊಳತ್ತೂರು ಗ್ರಾಮದಲ್ಲಿ 400 ವರ್ಷಗಳ ಇತಿಹಾಸವಿರುವ, ಬಾವಿ ಶ್ರೀ ಬಸವೇಶ್ವರ ದೇವರ ವಾರ್ಷಿಕ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಸುತ್ತಮುತ್ತಲ ವಿವಿಧ ಗ್ರಾಮಗಳಿಂದ ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಮಹೋತ್ಸವದ ದಿನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆ ಗಮನಹರಿಸಲಿ ಎನ್ನುತ್ತಾರೆ ಭಕ್ತಾದಿಗಳು. ಮಹೋತ್ಸವದ ನೇತೃತ್ವವನ್ನು ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್, ಪ್ರಮುಖರಾದ ಸಿ.ಕೆ. ಕೊಮಾರಪ್ಪ, ಸಿ.ಪಿ. ಹರೀಶ್, ಬೆಳ್ಳಿಯಪ್ಪ, ಗಣಪತಿ, ಪುಟ್ಟಪ್ಪ, ಚಂದ್ರಪ್ಪ, ಕುಶಾಲಪ್ಪ, ಸಿ.ಎಂ. ಸುರೇಶ್ ಇತರರು ಉಪಸ್ಥಿತರಿದ್ದರು. ಉತ್ಸಾಹಿ ಯುವಕರು ಅನ್ನಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಶ್ರಮಿಸಿದರು.