ಮಡಿಕೇರಿ, ಮಾ. 18: ನಗರದ ಬೆಟ್ಟ ಶ್ರೇಣಿ ಸ್ಟೋನ್ಹಿಲ್ನಲ್ಲಿ ರೂ. 5.75 ಕೋಟಿ ಅಂದಾಜು ವೆಚ್ಚದ 10 ಮೀ. ಗೋಳಾಕೃತಿಯ ‘3ಡಿ’ ಕಿರು ತಾರಾಲಯ ನಿರ್ಮಾಣಕ್ಕಾಗಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭ ಜಿ.ಪಂ. ಅಧ್ಯಕ್ಷ ಹರೀಶ್, ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಅರಣ್ಯ ನಿಗಮ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಟ್ಟು ಚಂಗಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್, ಖಜಾಂಚಿ ಮನು ಮೇದಪ್ಪ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು, ನಗರಸಭಾ ಸದಸ್ಯರು ಹಾಜರಿದ್ದರು.