ವೀರಾಜಪೇಟೆ, ಮಾ. 18: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದಶಮಾನೋತ್ಸವದ ದಶ ಸಂಗಮ ಸಂಭ್ರಮ ಕಾರ್ಯಕ್ರಮವನ್ನು ‘ದಶ ಸಂಗಮ’ ಪುಸ್ತಕ ಬಿಡುಗಡೆಗೊಳಿಸುವದರ ಮೂಲಕ ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಭಾಗೀರಥಿ ಉದ್ಘಾಟಿಸಿದರು

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ ಪ್ರಾಸ್ತವಿಕವಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀರಂಗಪಟ್ಟಣದ ಪರಿವರ್ತನಾ ಶಾಲೆಯ ಮುಖ್ಯಸ್ಥರು ಹಾಗೂ ಅಂತರ್ರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಚೇತನ್ ರಾಮ್ ವ್ಯಕ್ತಿತ್ವ ವಕಸನ ಕುರಿತು ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 8ನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಪೂಜಿತಾಳನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಿ.ಕೆ. ಸರಸ್ವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿ ಬೋಪಯ್ಯ ಉಪಸ್ಥಿತರಿದ್ದರು. ದಶ ಸಂಗಮ ಕಾರ್ಯಕ್ರಮದಲ್ಲಿ ನೂರಾರು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾಲೇಜಿನ ಉಪನ್ಯಾಸಕ ಪ್ರೋ. ಕೆ. ಬಸವರಾಜು ನಿರೂಪಿಸಿ, ಪ್ರೊ. ಕೆ.ಟಿ. ಬೋಪಯ್ಯ ಸ್ವಾಗತಿಸಿದರು. ಜಿ.ಆರ್. ದೀವಿಕಾ ಪ್ರಾರ್ಥಿಸಿದರು.