ಗೋಣಿಕೊಪ್ಪಲು, ಮಾ. 27: ಮಾಯಮುಡಿ ಕಮಟೆ ಮಹಾದೇಶ್ವರ ದೇವಸ್ಥಾನದಲ್ಲಿ ತಾ. 29 ರಂದು ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿದೆ. ಬೆ. 11 ಕ್ಕೆ ಕ್ಷೀರಾಭಿಷೇಕ, ಎಳನೀರು ಅಭಿಷೇಕ, ವಿಶೇಷ ಪೂಜೆ ಹಾಗೂ ಅನ್ನದಾನ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸಣ್ಣುವಂಡ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.