ಮಡಿಕೇರಿಯ ಸುದರ್ಶನ ಬಡಾವಣೆಯಲ್ಲಿರುವ ಶ್ರೀ ಮುನೀಶ್ವರ ದೇವಾಲಯ ಹಾಗೂ ಚಾಮುಂಡೇಶ್ವರಿ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ತಾ. 29 ಹಾಗೂ 30ರಂದು ವಿಶೇಷ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ತಾ. 29 ರಂದು ಬೆಳಿಗ್ಗೆ 7.30 ಗಂಟೆಗೆ ಮಹಾ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಂತರ ಆಟೋಟ ಸ್ಪರ್ಧೆಗಳು ನಡೆಯಲಿವೆ. ತಾ. 30 ರಂದು ಬೆಳಿಗ್ಗೆ 6 ರಿಂದ 9 ರವರೆಗೆ ಹರಕೆ ಒಪ್ಪಿಸುವದು, 11.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ 1 ರಿಂದ 3 ರವರೆಗೆ ಅನ್ನಸಂತರ್ಪಣೆ ನಡೆಯಲಿದೆ.