ವೀರಾಜಪೇಟೆ, ಮಾ. 29: ಭಾಷೆ ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಪಡಿಸಲು ಉಪಯುಕ್ತವಾದ ಮಹತ್ತರ ಸಾಧನವಾಗಿದೆ ಎಂಬದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಹೇಳಿದ್ದಾರೆ.ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಸ್ಥಳೀಯ ಅನ್ವಾರುಲ್ ಹುದಾ ಸೆಂಟರ್ ಇತರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ “ಎಸ್.ಎಸ್. ರಾಮಮೂರ್ತಿ ಸ್ಮಾರಕ ದತ್ತಿನಿಧಿ” ಉಪನ್ಯಾಸ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಸ್ಥಳೀಯ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಎಂ.ಪಿ. ದಮಯಂತಿ “ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಕವಿಗಳು ಮತ್ತು ಕಲಾವಿದರ ಕೊಡುಗೆ” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ವೀರಾಜಪೇಟೆ ತಾಲೂಕು ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ.ಪಂ. ಉಪಾಧ್ಯಕ್ಷೆ ತಸ್ನೀಂ ಅಕ್ತರ್, ಕರ್ನಾಟಕ ಸಂಘದ ಅಧ್ಯಕ್ಷ ಚಿಲ್ಲವಂಡ ಪಿ. ಕಾವೇರಪ್ಪ, ಅನ್ವಾರುಲ್ ಹುದಾ ಸೆಂಟರಿನ ಅರ್ಥಶಾಸ್ತ್ರ ಉಪನ್ಯಾಸಕ ಶಾಕಿರ್, ಕನ್ನಡ ಸಾಹಿತ್ಯ ಪರಿಷತ್ ಶ್ರೀಮಂಗಲ ಹೋಬಳಿ ಅಧ್ಯಕ್ಷ ಚಟ್ಟಂಗಡ ರವಿ ಸುಬ್ಬಯ್ಯ ವೇದಿಕೆಯಲ್ಲಿದ್ದರು. ಕ.ಸಾ.ಪ. ತಾಲೂಕು ಸಮಿತಿ ನಿರ್ದೇಶಕಿ ನಳಿನಾಕ್ಷಿ ಸ್ವಾಗತಿಸಿದರು. ಅಮ್ಮುಣಿಚಂಡ ಪ್ರವೀಣ್ ಚಂಗಪ್ಪ ನಿರೂಪಿಸಿದರೆ, ಟೋಮಿ ಥೋಮಸ್ ವಂದಿಸಿದರು.