ಕುಶಾಲನಗರ, ಮಾ. 29: ಎನ್‍ಸಿಸಿ ಕೆಡೆಟ್‍ಗಳಿಗೆ ದೊರಕು ವಂತಹ ಮೀಸಲಾತಿ ಸ್ಟೂಡೆಂಟ್ ಪೊಲೀಸ್ ಕೆಡೆಟ್‍ಗಳಿಗೆ ಲಭಿಸುವಂತಾಗಬೇಕಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಸ್ಟುಡೆಂಟ್ ಪೊಲೀಸ್ ಕೆಡೆಟ್ (ಎಸ್‍ಪಿಸಿ) ಘಟಕದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್‍ಪಿಸಿ ಎಂಬ ವಿನೂತನ ಯೋಜನೆ ಮೂಲಕ ಪೊಲೀಸ್ ಇಲಾಖೆ ವಿದ್ಯಾರ್ಥಿಗಳನ್ನು ಸಮಾಜಮುಖಿ ಕಾರ್ಯಗಳತ್ತ ಪ್ರೇರೇಪಿಸುತ್ತಿರುವದು ಶ್ಲಾಘನೀಯ ವಿಚಾರವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪೊಲೀಸ್ ವೃತ್ತ ನಿರೀಕ್ಷಕ ಕ್ಯಾತೆಗೌಡ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಶಿಸ್ತು, ಸಮಯಪಾಲೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದರು.
ಎಸ್‍ಪಿಸಿ ತರಬೇತುದಾರರಾದ ಕುಶಾಲನಗರ ಪೊಲೀಸ್ ಸಿಬ್ಬಂದಿಗಳಾದ ರವಿ ಹಾಗೂ ಜೋಸೆಫ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಎಸ್‍ಪಿಸಿ ಘಟಕದ ಅನುಭವಗಳ ಕುರಿತು ಕೆಡೆಟ್‍ಗಳು ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್. ವಸಂತ ಕುಮಾರ್, ಉಪ ಪ್ರಾಂಶುಪಾಲ ಆಯಚ್ಚು, ಸಿಪಿಓ ಅಧಿಕಾರಿ ಸದಾಶಿವ ಪಲ್ಲೇದ್, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ವೆಂಕಟೇಶ್, ಹಿರಿಯ ಶಿಕ್ಷಕ ಎ.ಸಿ. ಮಂಜುನಾಥ್ ಇದ್ದರು.