ಆಲೂರುಸಿದ್ದಾಪುರ, ಮಾ. 29: ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯ ಬಿ.ಆರ್.ಸಿ ಕೇಂದ್ರದಲ್ಲಿ ತಾ. 31 ರಂದು ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುವದೆಂದು ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಸ್. ಚೇತನ್ ಶನಿವಾರಸಂತೆಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಡಿಕೇರಿಯ ಬಿಆರ್‍ಸಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತ ಸೋಮಲ್, ಮಡಿಕೇರಿ ನಗರ ಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಉಪ ಸಮನ್ವಯ ಅಧಿಕಾರಿ ಭಾಗ್ಯಲಕ್ಷ್ಮಿ, ಡಿಡಿಪಿಐ ಬಸವರಾಜು, ಕ್ಷೇತ್ರ ಸಮನ್ವಯ ಅಧಿಕಾರಿ ಗಾಯತ್ರಿ, ಜಿಲ್ಲೆಯ 3 ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಭಾಗವಹಿಸುತ್ತಾರೆ. ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರತಿಭಾನ್ವಿತ ಶಿಕ್ಷಕಿಯರಾದ ಸೋಮವಾರಪೇಟೆ ದೊಡ್ಡಮಳ್ತೆ ಸ.ಕಿ. ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಎಂ.ವಿ. ಜ್ಯೋತಿ, ಪೊನ್ನಂಪೇಟೆ ಸ.ಹಿ. ಪ್ರಾ.ಶಾಲಾ ಮುಖ್ಯ ಶಿಕ್ಷಕಿ ರವಿ, ಮೂರ್ನಾಡು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸರೋಜ ಹಾಗೂ ಕ್ರೀಡಾ ಸಾಧಕಿ ಜಾಜಿ ಅವರುಗಳನ್ನು ಸನ್ಮಾನಿಸಲಾಗುತ್ತದೆ. ಈ ಸಂದರ್ಭ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ಹಾಜರಿದ್ದರು.