ಆಲೂರುಸಿದ್ದಾಪುರ, ಮಾ. 29: ಆಲೂರುಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲಾ ಮಿನಿ ಕ್ರೀಡಾಂಗಣದಲ್ಲಿ ಕೂರ್ಗ್ ಹಂಟರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಆಲೂರುಸಿದ್ದಾಪುರ ಕ್ರಿಕೆಟ್ ಕಪ್ ಮುಕ್ತ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ಯುಗಾದಿ ಹಬ್ಬದ ಪ್ರಯುಕ್ತವಾಗಿ ಹಮ್ಮಿಕೊಂಡಿರುವ ಆಲೂರುಸಿದ್ದಾಪುರ ಕ್ರಿಕೆಟ್ ಕಪ್ ಪಂದ್ಯಾವಳಿಯಲ್ಲಿ 12 ತಂಡಗಳು ಭಾಗವಹಿಸಿದ್ದವು. ಕ್ರಿಕೆಟ್ ಪಂದ್ಯಾವಳಿಗೆ ಸಿದ್ದಲಿಂಗಪುರದ ಉದ್ಯಮಿ ನಾಪಂಡ ಮುತ್ತಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಲೂರುಸಿದ್ದಾಪುರ ಜಾನಕಿ ಕಾಳಪ್ಪ ವಿದ್ಯಾಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಹೊಸೂರು ಶಿವಪ್ರಕಾಶ್, ಕ್ರಿಕೆಟ್ ಕಪ್ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.