ಮಡಿಕೇರಿ, ಮಾ. 30: ಕರ್ನಾಟಕ ರಾಜ್ಯದೆಲ್ಲೆಡೆ ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಪ್ರಾರಂಭಗೊಂಡಿದೆ. ಕೊಡಗು ಜಿಲ್ಲೆಯ 27 ಕೇಂದ್ರಗಳಲ್ಲಿ ಪ್ರಥಮ ದಿನದ ಪರೀಕ್ಷೆಯು ಶಾಂತಿಯುತವಾಗಿ ನಡೆದಿರುವದಾಗಿ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.ಎಲ್ಲಾ ರೀತಿ ಮುಂಜಾಗ್ರತಾ ವ್ಯವಸ್ಥೆಯಡಿ ಮಡಿಕೇರಿ ತಾಲೂಕು, ವೀರಾಜಪೇ ಹಾಗೂ ಸೋಮವಾರಪೇಟೆ ತಾಲೂಕುಗಳ ಆಯ್ದ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ನಡೆಯಿತು. ಇಲಾಖೆಯು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಕಾರ್ಯಪಡೆಯ ನಿಗಾವಿರಿಸಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಗೆ ಅರ್ಹತೆ ಪಡೆದಿದ್ದ 8066 ಅಭ್ಯರ್ಥಿಗಳಲ್ಲಿ
8066 ವಿದ್ಯಾರ್ಥಿಗಳು ಪಾಲ್ಗೊಂಡು, 312 ಮಂದಿ ಕಾರಣಾಂತರದಿಂದ ಗೈರು ಆಗಿರುವದಾಗಿ ತಿಳಿದು ಬಂದಿದೆ. ಮಡಿಕೇರಿ ತಾಲೂಕಿನಲ್ಲಿ 109, ವೀರಾಜಪೇಟೆ ತಾಲೂಕಿನಲ್ಲಿ 120 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 83 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ.
ವೀರಾಜಪೇಟೆ ವರದಿ:
ವೀರಾಜಪೇಟೆ ತಾಲೂಕಿನ 8 ಕೇಂದ್ರಗಳಲ್ಲಿ ಎಸ್ಎಸ್ಎಲ್ಎಲ್ಸಿ ಪರೀಕ್ಷೆÉ ಗುರುವಾರ ಶಾಂತಿಯುತವಾಗಿ ನಡೆಯಿತು.ವೀರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಇಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ ಪಾಂಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿ ನಾದ್ಯಂತ 2395 ವಿದ್ಯಾರ್ಥಿಗಳು ಕನ್ನಡ ಪರೀಕ್ಷೆಗೆ ಹಾಜರಾಗಿದ್ದಾರೆ. ಸರ್ಕಾರಿ ಶಾಲೆಯ 646, ಅನುದಾನಿತ ಶಾಲೆಯ 732 ಹಾಗೂ ಅನುದಾನ ರಹಿತ ಶಾಲೆಯ 1022 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದರು.
ವೀರಾಜಪೇಟೆ ಪಟ್ಟಣದಲ್ಲಿ ಸಂತ ಅನ್ನಮ್ಮ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯಲ್ಲಿ ಗೋಣಿಕೊಪ್ಪಲಿನ ಸರ್ಕಾರಿ ಪ್ರೌಢಶಾಲೆ, ಗೋಣಿಕೊಪ್ಪ ಪ್ರೌಢಶಾಲೆ, ಪೊನ್ನಂಪೇಟೆಯ ಸರ್ಕಾರಿ ಪ್ರೌಢಶಾಲೆ, ಶ್ರೀಮಂಗಲ, ತಿತಿಮತಿ, ಪಾಲಿಬೆಟ್ಟದಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು ಎಂದು ತಿಳಿಸಿದರು.
ಸೋಮವಾರಪೇಟೆ
ಸೋಮವಾರಪೇಟೆ ಪಟ್ಟಣದ ಓಎಲ್ವಿ ಕಾನ್ವೆಂಟ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿದ್ದು ಒಟ್ಟು 584 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಎಲ್ವಿ ಕಾನ್ವೆಂಟ್ನಲ್ಲಿ ಒಟ್ಟು 352 ವಿದ್ಯಾರ್ಥಿಗಳು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 232 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.