ಸುಂಟಿಕೊಪ್ಪ, ಮಾ. 30: ಸುಂಟಿಕೊಪ್ಪ ನಾಡು ಕಚೇರಿ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರು ಸೇವನೆಯಿಂದ ಆರೋಗ್ಯವನ್ನು ಕಾಪಾಡಬಹುದು. ರೋಗ ಬರುವ ಮುಂಚೆ ಅಗತ್ಯ ಕ್ರಮ ಕೈಗೊಳ್ಳುವದು ಒಳಿತು ಎಂದರು.
ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾತನಾಡಿ, ಜನರ ಉಪಯೋಗಕ್ಕಾಗಿ ಸುಂಟಿಕೊಪ್ಪ ಜನತೆಗೆ ಸರಕಾರ ಹಾಗೂ ಶಾಸಕರ ಪ್ರಯತ್ನದಿಂದ ಶುದ್ಧ ಕುಡಿಯುವ ನೀರು ಒದಗಿಸಲಾಗಿದೆ. ಆದರೆ ಪಟ್ಟಣದ ಹೃದಯ ಭಾಗದಲ್ಲಿ ಈ ಕೇಂದ್ರ ಸ್ಥಾಪಿಸಿದರೆ ಜನರಿಗೆ ಇನ್ನಷ್ಟು ಪ್ರಯೋಜನವಾಗುತ್ತಿತ್ತು ಎಂದರು.
ಜಿ.ಪಂ. ಸದಸ್ಯೆ ಚಂದ್ರಕಲಾ ಮಾತನಾಡಿ, ಜನರು ಇದರ ಪ್ರಯೋಜನ ಪಡೆದುಕೊಳ್ಳ ಬೇಕೆಂದರು. ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಬಿ.ಬಿ. ಭಾರತೀಶ್, ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ. ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ, ಗ್ರಾ.ಪಂ. ಸದಸ್ಯರುಗಳಾದ ಬಿ.ಎಂ. ಸುರೇಶ್, ಚಂದ್ರ, ರಜಾಕ್, ಗಿರಿಜಾ ಉದಯಕುಮಾರ್, ನಾಗರತ್ನ, ಶಿವಮ್ಮ, ಕಂದಾಯ ಪರಿವೀಕ್ಷಕ ಬಿ.ಪಿ. ಕೃಷ್ಣಪ್ಪ, ಮಡಿಕೇರಿ ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಪಿ.ಕೆ. ಶೇಷಪ್ಪ, ನಾಕೂರು-ಶಿರಂಗಾಲ ಗ್ರಾ.ಪಂ. ಸದಸ್ಯ ಅಂಬೆಕಲ್ ಚಂದ್ರಶೇಖರ್, ನಗರ ಬಿಜೆಪಿ ಅಧ್ಯಕ್ಷ ಪಿ.ಆರ್. ಸುನೀಲ್, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಬಿ.ಕೆ. ಮೋಹನ್, ಕಾಂಗ್ರೆಸ್ ನಗರಾಧ್ಯಕ್ಷ ಕೆ.ಐ. ರಫೀಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಪಂಚಾಯಿತಿ ಸಿಬ್ಬಂದಿ ಪುನೀತ್ ಸ್ವಾಗತಿಸಿ, ವಂದಿಸಿದರು.