ಕೂಡಿಗೆ, ಮಾ. 30: ಕುಶಾಲನಗರ ಹೋಬಳಿ ವ್ಯಾಪ್ತಿಯ ಕೂಡಿಗೆ, ಹೆಬ್ಬಾಲೆ, ಶಿರಂಗಾಲ, ಕೂಡುಮಂಗಳೂರು ಗ್ರಾಮಗಳ ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್‍ಗಳಿಂದ ಸಾಲ ಪಡೆಯುವ ಮತ್ತು ಗ್ರೇಡ್ ವಿಷಯವಾಗಿ ಐಎನ್‍ಟಿಯುಸಿ ವತಿಯಿಂದ ಕಾರ್ಯಾಗಾರವನ್ನು ಹಮ್ಮಿ ಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಐಎನ್‍ಟಿಯುಸಿ ಅಧ್ಯಕ್ಷ ಟಿ.ಪಿ. ಹಮೀದ್ ಉದ್ಘಾಟಿಸಿ, ಸ್ತ್ರೀ ಶಕ್ತಿ ಹಾಗೂ ಸ್ವ-ಸಹಾಯ ಗುಂಪಿನವರು ಸರಕಾರದಿಂದ ಸಿಗುವ ಸೌಲಭ್ಯ ಗಳನ್ನು ಪಡೆಯಲು ಮುಂದಾಗ ಬೇಕು. ಅಲ್ಲದೆ, ಗುಂಪು ರಚನೆಯ ಮೂಲಕ ವಿವಿಧ ಗೃಹೋಪಯೋಗಿ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಿ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಬೇಕೆಂದು ಕರೆ ನೀಡಿದರು.

ಬ್ಯಾಂಕ್‍ಗಳಿಂದ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಸಿಗುವ ಸಾಲ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವ ರೀತಿಯ ತರಬೇತಿಗಳನ್ನು ನಡೆಸಲಾಗುತ್ತಿದೆ ಎಂದರು.

ಈ ಸಂದರ್ಭ ಕಾರ್ಯದರ್ಶಿ ಗೋವಿಂದರಾಜ್ ದಾಸ್ ಸೇರಿದಂತೆ ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರು ಇದ್ದರು.