ಕೂಡಿಗೆ, ಮಾ. 30: ಕೂಡಿಗೆ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಚಂದ್ರಶೇಖರ್ ಅವರು ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯಿತಿ ವಿದ್ಯುತ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಮತ್ತು ಎನ್‍ಒಸಿ ನೀಡುವಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಎಸ್. ಕಾಂತರಾಜ್ ಅವರು ಆರೋಪಿಸಿದ್ದ ಹಿನ್ನೆಲೆಯಲ್ಲಿ ಸಂಬಂಧಿಸಿದ ಕಡತಗಳನ್ನು ಇಂದು ತಾಲೂಕು ಕಚೇರಿಗೆ ಕೊಂಡೊಯ್ದು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿಯವರಿಗೆ ಕಳುಹಿಸಲಾಗುವದು ಎಂದರು.

ಈ ಸಂದರ್ಭ ದೂರುದಾರ ಕಾಂತರಾಜ್, ಹಾಗೂ ಗ್ರಾ.ಪಂ. ಅಧ್ಯಕ್ಷ್ಷೆ ಪ್ರೇಮಲೀಲಾ, ಅಭಿವೃದ್ಧಿ ಅಧಿಕಾರಿ ರವೀಶ್ ಇದ್ದರು.