ಮಡಿಕೇರಿ, ಮಾ. 30: ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಸದಸ್ಯರಾಗಿರುವ ಡಾ|| ಪುಷ್ಪಾ ಕುಟ್ಟಣ್ಣ ಅವರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಲವಾರು ಶೈಕ್ಷಣಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವದರಿಂದ ಪೊಲೀಸ್ ದೂರು ಪ್ರಾಧಿಕಾರದ ಸದಸ್ಯತ್ವದಿಂದ ಮುಕ್ತಗೊಳಿಸಬೇಕೆಂದು ಕೋರಿ ಸರಕಾರದ ಅಧೀನ ಕಾರ್ಯದರ್ಶಿ, ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸದಸ್ಯ ಕಾರ್ಯದರ್ಶಿಯಾಗಿರುವ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.