ಸೋಮವಾರಪೇಟೆ, ಮಾ. 30: ಇಲ್ಲಿನ ಶ್ರೀ ರಾಮನವಮಿ ಉತ್ಸವ ಸಮಿತಿ ಹಾಗೂ ಹಿಂದೂ ಜಾಗರಣಾ ವೇದಿಕೆ ಮತ್ತು ಶ್ರೀ ಆಂಜನೇಯ ದೇವಾಲಯ ಸಮಿತಿ ಆಶ್ರಯದಲ್ಲಿ ಏಪ್ರಿಲ್ 5 ರಂದು ಅದ್ಧೂರಿ ರಾಮನವಮಿಯನ್ನು ಆಚರಿಸ ಲಾಗುವದು ಎಂದು ಸಮಿತಿಯ ಅಧ್ಯಕ್ಷ ಸುಭಾಶ್ ತಿಮ್ಮಯ್ಯ ಹೇಳಿದರು.
ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನವಮಿ ಅಂಗವಾಗಿ ಅಂದು ಅಪರಾಹ್ನ ಆಂಜನೇಯ ದೇವಾಲಯದ ಆವರಣದಲ್ಲಿ ಭೂತನಕಾಡು ರವಿ ಮತ್ತು ತಂಡದಿಂದ ಭಜನೆ, ಸಂಜೆ 5.30 ಗಂಟೆಗೆ ಜನಜಾಗೃತಿ ಸಭೆ ನಡೆಯಲಿದೆ ಎಂದರು. ಸಭೆಯಲ್ಲಿ ಆಂಜನೇಯ ದೇವಾಲಯದ ಸಮಿತಿ ಅಧ್ಯಕ್ಷ ಸಿ.ಪಿ. ಗೋಪಾಲ್, ದೇವಾಲಯ ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಸೀತಾರಾಂ ಉಪಸ್ಥಿತರಿರುವರು. ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕ್ಷೇತ್ರೀಯ ಸಂಘಟನಾ ಮಂತ್ರಿ ಜಗದೀಶ್ ಕಾರಂತ್ ಭಾಗವಹಿಸಿ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದರು. ಸಂಜೆ 6 ಗಂಟೆಗೆ ಶ್ರೀ ರಾಮ ದೇವರ ಉತ್ಸವ ಮೂರ್ತಿಯನ್ನು ವಿದ್ಯುತ್ ಅಲಂಕೃತ ಮಂಟಪದೊಂದಿಗೆ ಊರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಗುವದು. ಡೊಳ್ಳು ಕುಣಿತ, ಸುಗ್ಗಿ ಕುಣಿತ, ಪೂಜಾ ಕುಣಿತ, ವೀರಗಾಸೆ, ಚಂಡೆ, ವಾದ್ಯಗೋಷ್ಠಿ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ಗೋಷ್ಠಿಯಲ್ಲಿ ಆಂಜನೇಯ ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ. ಗೋಪಾಲ್, ಉತ್ಸವ ಸಮಿತಿ ಉಪಾಧ್ಯಕ್ಷ ಹರೀಶ್, ಕಾರ್ಯದರ್ಶಿ ಲೋಕೇಶ್, ಖಜಾಂಚಿ ರವಿಕುಮಾರ್ ಉಪಸ್ಥಿತರಿದ್ದರು.