ಹೆಬ್ಬಾಲೆ, ಮಾ. 31: ಇಲ್ಲಿನ ತೊರೆನೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಮತ್ತು ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ಅಂಬೇಡ್ಕರ್ ಕಾಲೋನಿಯಲ್ಲಿ ಉಚಿತ ಆಯುರ್ವೇದ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 70 ಜನ ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.

ತೊರೆನೂರು ಗ್ರಾ.ಪಂ. ಅಧ್ಯಕ್ಷ ದೇವರಾಜು ಕಾರ್ಯಕ್ರಮ ಉದ್ಘಾಟಿಸಿ ಪ್ರಯೋಜನವನ್ನು ಪಡೆಯುವಂತೆ ಶಿಬಿರಾರ್ಥಿಗಳಿಗೆ ತಿಳಿಸಿದರು.

ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಆರ್. ಹೆಚ್ ಅಮೂಲ್ಯ, ಅವರು ಮಾತನಾಡಿ, ದೀರ್ಘಕಾಲಿಕ ಖಾಯಿಲೆಗಳಲ್ಲಿ ಆಯುರ್ವೇದ ಚಿಕಿತ್ಸೆ ಪರಿಣಾಮಕಾರಿಯಾಗಿದ್ದು, ಎಂದು ಅಭಿಪ್ರಾಯಪಟ್ಟರು. ಶಿಬಿರದಲ್ಲಿ ಡಾ. ಸ್ಮಿತಾ ಆರೋಗ್ಯ ತಪಾಸಣೆ ನಡೆಸಿದರು. ಸಿಬ್ಬಂದಿಗಳಾದ ಸಚಿನ್ ಟಿ.ಎಸ್ ಔಷಧ ವಿತರಿಸಿದರು.