ನಾಪೆÇೀಕ್ಲು, ಮಾ. 31: ಕೈಕಾಡು ಶ್ರೀ ಭಗವತಿ ದೇವಳದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಸುಮಾರು 80 ಸಾವಿರ ರೂ. ವೆಚ್ಚದಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಲಾದ ತೆರೆದ ಬಾವಿಯನ್ನು ಜಿಲ್ಲಾ ಪಂಚಾಯಿತಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ನೆರೆಯಂಡಮ್ಮಂಡ ಉಮಾ ಪ್ರಭು, ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಬೊಳ್ಳಂಡ ರವಿ, ಕಾರ್ಯದರ್ಶಿ ಮುಕ್ಕಾಟಿರ ಗಣೇಶ್, ಕೊಣಂಜಗೇರಿ ಗ್ರಾಮ ಪಂಚಾಯಿತಿ ಸದಸ್ಯರು, ಅರ್ಚಕ ಸುರೇಶ್ ಇದ್ದರು.