ಮಡಿಕೇರಿ, ಮಾ. 31: ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ಕೊಡಮಾಡುವ 2016ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಜಿಲ್ಲೆಯ ಪತ್ರಕರ್ತರಿಂದ ವರದಿ,ಲೇಖನ, ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ.
ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ, ಸಂಘದ ಮಾಜಿ ಅಧ್ಯಕ್ಷ ದಿ. ಕೆ.ಕೆ. ಶಶಿಧರ್ ಸ್ಮರಣಾರ್ಥ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ, ಸಂಘದ ಅಧ್ಯಕ್ಷರಾಗಿದ್ದ ಸಿ.ಎನ್. ಸುನಿಲ್ ಕುಮಾರ್ ಸ್ಮರಣಾರ್ಥ ಸ್ಥಾಪಿಸಿರುವ ಅತ್ಯುತ್ತಮ ವೀಡಿಯೋಗ್ರಾಫಿಗೆ, ಸಂಘದ ಮೂಲಕ ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಅವರು ಸ್ಥಾಪಿಸಿರುವ ಅತ್ಯುತ್ತಮ ತನಿಖಾ ವರದಿಗೆ, ಕೋವರ್ಕೊಲ್ಲಿ ಇಂದ್ರೇಶ್ ಅವರು ತಮ್ಮ ತಂದೆ ಕೋವರ್ಕೊಲ್ಲಿ ಚಂದ್ರಶೇಖರ್ ಸ್ಮರಣಾರ್ಥ ಸ್ಥಾಪಿಸಿರುವ ಮಾನವೀಯ ವರದಿಗೆ, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ಅವರು ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ವರದಿಗೆ, ಕೊಡಗು ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ಅಜ್ಜಮಾಡ ಕಟ್ಟಿಮಂದಯ್ಯ ಅವರು ತಮ್ಮ ತಂದೆ-ತಾಯಿ ಅಜ್ಜಮಾಡ ಸುಬ್ಬಯ್ಯ ಹಾಗೂ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ವರದಿಗೆ, ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಮಾವ ಕೋಟೇರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿಗೆ, ಕೈಬುಲಿರ ಪಾರ್ವತಿ ಬೋಪಯ್ಯ ಅವರು ತಮ್ಮ ತಂದೆ, ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿಗೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎಸ್.ಎ. ಮುರಳೀಧರ ಅವರು ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿಗೆ, ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಮಂದ್ರಿರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ