ಮೂರ್ನಾಡು, ಏ. 1: ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಿಮೆಂಟ್ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಪಟ್ಟಣದಲ್ಲಿ ಕುಡಿಯುವ ನೀರು ಸರಬರಾಜು ಟ್ಯಾಂಕ್ ಬಳಿ ಬೆಂಗಳೂರು ಇಇಇ ಇಂಡಿಯಾ ಸಂಸ್ಥೆ ವತಿಯಿಂದ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ 3 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆಯಲ್ಲಿ ನಿರ್ಮಿಸಲಾದ ಸಿಮೆಂಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿ ನೀರಿನಿಂದ ಅನೇಕ ರೋಗಗಳು ಹರಡುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಕಾರ್ಡ್ ಬಳಸಿ ಶುದ್ಧ ನೀರನ್ನು ಪಡೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕಲಾವತಿ ಪೂವಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ, ಉಪಾಧ್ಯಕ್ಷ ಪವಿತ್ರ ಕುಂಞಪ್ಪ, ಪಿಡಿಒ ಲೋಕೇಶ್, ಗ್ರಾ.ಪಂ. ಸದಸ್ಯರು ಹಾಜರಿದ್ದರು.