ಕುಶಾಲನಗರ, ಏ. 1: ನದಿಗಳು ನಾಗರಿಕತೆಯ ಹಾಗೂ ಸಂಸ್ಕøತಿಯ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಟಿಬದ್ದರಾಗಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್ ಕರೆ ನೀಡಿದ್ದಾರೆ.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸ್ಥಳೀಯ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ಮಾತನಾಡಿದ ಸರಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕ ಜಿ. ಶ್ರೀನಾಥ್, ಮಾನವ ನಿರ್ಮಿತ ವ್ಯವಸ್ಥೆಯಿಂದ ನಿಸರ್ಗ, ಪರಿಸರಕ್ಕೆ ಹಾನಿಯುಂಟಾಗುತ್ತದೆ ಎಂದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಮಾಜಿ ಗೌರವಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಮೈಸೂರು ಕೊಡಗು ವ್ಯಾಪ್ತಿಯ ಪ್ರತಿನಿಧಿ ಕೃಷ್ಣೇಗೌಡ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿದರು.

ಪರಿಷತ್‍ನ ಪ್ರಮುಖ ಡಾ. ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮಿತಿಯ ಪದಾಧಿಕಾರಿಗಳಾದ ಡಿ.ಎಂ. ರೇವತಿ, ಎಸ್. ನಾಗರಾಜು, ಫಿಲಿಪ್‍ವಾಸ್, ಹರ್ಷ, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಮತ್ತಿತರರು ಇದ್ದರು.

ರಾಜ್ಯ ಸಹ ಕಾರ್ಯದರ್ಶಿ ಟಿ.ಜಿ. ಪ್ರೇಮ್‍ಕುಮಾರ್ ಪ್ರಾಸ್ತಾವಿಕ ನುಡಿಗಳಾಡಿದರು, ಈಶ ನಿರೂಪಿಸಿ ದರು, ಎಂ.ಇ. ಮೊಯಿದ್ದೀನ್ ಸ್ವಾಗತಿಸಿದರು, ಪಿ.ಎಸ್. ರವಿಕೃಷ್ಣ ವಂದಿಸಿದರು.