ಮಡಿಕೇರಿ, ಏ. 2: ಇಂದು ಜಿಲ್ಲೆಯಾದ್ಯಂತ ನಡೆದ, ಪೋಲಿಯೋ ನಿವಾರಣಾ ಲಸಿಕೆ ಕಾರ್ಯಕ್ರಮವು ಶೇ. 93.75ರಷ್ಟು ಸಾಧನೆಯಾಗಿದೆ. ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯಿಂದ 45650 ಮಂದಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ನಿವಾರಣಾ ಹನಿ ಹಾಕುವ ಗುರಿ ಹೊಂದಲಾಗಿತ್ತು. ಈ ಪೈಕಿ 42799 ಮಕ್ಕಳಿಗೆ ಲಸಿಕೆ ನೀಡುವದರೊಂದಿಗೆ ಮೇಲಿನ ಸಾಧನೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಂಗಪ್ಪ ತಿಳಿಸಿದ್ದಾರೆ.ಗ್ರಾಮಾಂತರ ಪ್ರದೇಶದಲ್ಲಿ 40972 ಮಕ್ಕಳ ಪೈಕಿ 38277 ಮಕ್ಕಳಿಗೆ ಲಸಿಕೆ ನೀಡಿದ್ದು, ಶೇ.93.42 ಗುರಿಯೊಂದಿಗೆ ನಗರ ಹಾಗೂ ಪಟ್ಟಣ ಪ್ರದೇಶಗಳ 4678 ಮಕ್ಕಳಲ್ಲಿ 4522 ರಷ್ಟು ಶಿಶುಗಳಿಗೆ ಲಸಿಕೆ ನೀಡಿ ಶೇ. 96.67 ಗುರಿ ಹೊಂದಿರುವದಾಗಿ ಅವರು ಮಾಹಿತಿ ನೀಡಿದ್ದಾರೆ.

ಅಲ್ಲದೆ ಮಡಿಕೇರಿ ತಾಲೂಕಿನಲ್ಲಿ ಶೇ. 93.69, ಸೋಮವಾರಪೇಟೆ ತಾಲೂಕಿನಲ್ಲಿ ಶೇ. 94.96 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ಶೇ. 92.91ರಷ್ಟು

(ಮೊದಲ ಪುಟದಿಂದ) ಗುರಿ ಸಾಧಿಸಲಾಗಿದೆ ಎಂದು ಡಾ. ರಂಗಪ್ಪ ಅವರು ‘ಶಕ್ತಿ'ಗೆ ಖಚಿತಪಡಿಸಿದ್ದಾರೆ.

ಉದ್ಘಾಟನೆ

ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಾರ್ಡ್‍ನಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಪ್ರಥಮ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ ಸಹ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವದು ಅಗತ್ಯವಾಗಿದೆ. ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸು ಕಾಣಲು ಸಾಧ್ಯ ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಒ.ಆರ್. ಶ್ರೀರಂಗಪ್ಪ ಅವರು ಮಾತನಾಡಿ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಸಹ, ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು ಎಂದು ಮನವಿ ಮಾಡಿದರು.

ಪಲ್ಸ್ ಪೋಲಿಯೋ ಜಿಲ್ಲಾ ಮೇಲ್ವಿಚಾರಣಾಧಿಕಾರಿ ಡಾ.ನಿಲೇಶ್ ಮಾತನಾಡಿ ಪೋಲಿಯೋ ಹನಿಯಿಂದ ಬಿಟ್ಟು ಹೋಗಿರುವ ಐದು ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಮನೆ ಮನೆ ಭೇಟಿ ನೀಡಿ ಪೋಲಿಯೋ ಹನಿ ಹಾಕಲಾಗುತ್ತದೆ ಎಂದರು.

ನೇತ್ರ ತಜ್ಞರಾದ ಡಾ. ಪ್ರಶಾಂತ್ ಅವರು ಮಾತನಾಡಿದರು. ವೈದ್ಯಕೀಯ ಕಾಲೇಜಿನ ಪ್ರಾಧ್ಯಪಕರಾದ ಡಾ.ಕಾರ್ಯಪ್ಪ, ಮಡಿಕೇರಿ ತಾಲೂಕು ವೈದ್ಯಾಧಿಕಾರಿ ಡಾ.ರವಿಕುಮಾರ್, ಜಿಲ್ಲಾ ಆಸ್ಪತ್ರೆಯ ಡಾ.ನವೀನ್, ಅಶ್ವಿನಿ ಆಸ್ಪತ್ರೆಯ ಡಾ.ಕುಲಕರ್ಣಿ, ರೋಟರಿ, ಲಯನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಇತರರು ಪಾಲ್ಗೊಂಡಿದ್ದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಒಟ್ಟು 462 ಬೂತ್‍ಗಳನ್ನು ತೆರೆಯಲಾಗಿತ್ತು. ಅಲ್ಲದೆ 20 ಟ್ರಾನ್ಸಿಸ್ಟ್ ತಂಡಗಳು, 6 ಸಂಚಾರಿ ಲಸಿಕಾ ತಂಡ ವ್ಯವಸ್ಥೆ ಮಾಡಲಾಗಿತ್ತು. 1900 ಮಂದಿ ಲಸಿಕೆ ಹಾಕುವವರು, 90 ಮಂದಿ ಮೇಲ್ವಿಚಾರಕರು, 924 ಮಂದಿ ಮನೆ ಮನೆಗೆ ಭೇಟಿ ನೀಡುವ ತಂಡ ಕಾರ್ಯನಿರ್ವಹಿಸಿವೆ.

ಸೋಮವಾರಪೇಟೆ

ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಅಭಿಯಾನ ಸೋಮವಾರಪೇಟೆಯಲ್ಲಿ ನಡೆಯಿತು.

2017-18ನೇ ಸಾಲಿನ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ 14,384 ಮಕ್ಕಳಿಗೆ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪಾರ್ವತಿ ಹೇಳಿದರು.

ಏ.2 ರಿಂದ 4ರವರೆಗೆ ಲಸಿಕಾ ಕಾರ್ಯಕ್ರಮ ನಡೆಯಿದ್ದು, ತಾಲೂಕಿನಲ್ಲಿ ಗುರುತಿಸಲಾಗಿರುವ 141 ಲಸಿಕಾ ಕೇಂದ್ರಗಳಲ್ಲಿ 5ವರ್ಷ ಒಳಪಟ್ಟ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆಗಳನ್ನು ನೀಡಲಾಗುವದು. ಏ.3 ಮತ್ತು 4ರಂದು ಇಬ್ಬರು ಸದಸ್ಯರಿರುವ ಒಟ್ಟು 141 ಲಸಿಕಾ ತಂಡಗಳು ತಾಲೂಕಿನ ಪ್ರತಿ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಪಡೆಯಲು ಬಾಕಿಯಿರುವ ಮಕ್ಕಳಿಗೆ ಸ್ಥಳದಲ್ಲೇ ಲಸಿಕೆ ಹಾಕಲಾಗುವದು ಎಂದರು.

ವೀರಾಜಪೇಟೆ

ಭಾರತ ದೇಶ ಪೋಲಿಯೋ ನಿರ್ಮೂಲನೆಯಲ್ಲಿ ಯಶಸ್ಸನ್ನು ಕಂಡಿದ್ದರೂ ಕಾರ್ಯಕ್ರಮ ಮುಂದು ವರೆಸಲಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ ಹೇಳಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾ. 4ರವರೆಗೆ ಮುಂದುವರೆಯಲಿದೆ. ವೀರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಲಸಿಕೆ ಹಾಕಲು 6 ಕೇಂದ್ರಗಳನ್ನು ಆರಂಭಿಸಲಾಗಿದ್ದು ತಾ. 3ರಿಂದ ನಿಯೋಜಿತಗೊಂಡ ದಾದಿಯರು ಮನೆ, ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಲಿರುವದಾಗಿ ತಿಳಿಸಿದರು.

ಕುಶಾಲನಗರ

ಕುಶಾಲನಗರ ಕೊಪ್ಪ ಗ್ರಾಮಗಳ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಯಿತು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಪಟ್ಟಣ ಹಾಗೂ ಸುತ್ತಮುತ್ತ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪೋಲಿಯೋ ಹನಿ ನೀಡುವ ಕಾರ್ಯಕ್ರಮ ನಡೆಯಿತು.

ಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ರಾಮಚಂದ್ರ ಮತ್ತು ಸಿಬ್ಬಂದಿಗಳು ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್. ಚಂದ್ರಮೋಹನ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೇಂದ್ರದ 12 ಗ್ರಾಮಗಳಲ್ಲಿ 31 ಬೂತ್‍ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ ಡಾ.ರಾಮಚಂದ್ರ, ಮುಂದಿನ 2 ದಿನಗಳಲ್ಲಿ ಮನೆಮನೆಗೆ ತೆರಳಿ ಲಸಿಕೆ ನೀಡಲಾಗುವದು ಎಂದು ತಿಳಿಸಿದರು.

ಆಲೂರುಸಿದ್ದಾಪುರ

ಶನಿವಾರಸಂತೆ ಕೆಆರ್‍ಸಿ ವೃತ್ತದಲ್ಲಿ ತೆರೆದಿದ್ದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ ಶನಿವಾರಸಂತೆ ಗ್ರಾಮ ಪಂಚಾಯ್ತಿ ಸದಸ್ಯ ಎಸ್.ಎನ್. ಪಾಂಡು ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವಿನಯ್, ರವಿ, ಆಶಾ ಕಾರ್ಯ ಕರ್ತರಾದ ಭಾಗ್ಯ ಅಂಗನವಾಡಿ ಶಿಕ್ಷಕಿ ಇದ್ದರು. ತ್ಯಾಗರಾಜ ಕಾಲೋನಿಯ ಕೇಂದ್ರದಲ್ಲಿ ಶನಿವಾರಸಂತೆ ಗ್ರಾಮ ಪಂಚಾಯ್ತಿ ಸದಸ್ಯೆ ಉಷಾಜಯೇಶ್ ಚಾಲನೆ ನೀಡಿದರು. ಆರೋಗ್ಯ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು. ಮಾಲಂಬಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೆÇೀಲಿಯೋ ಕಾರ್ಯಕ್ರಮಕ್ಕೆ ಆಲೂರುಸಿದ್ದಾಪುರ ಗ್ರಾಮಪಂಚಾಯ್ತಿ ಅಧ್ಯಕ್ಷೆ ವೀಣಾ ಮತ್ತು ಸದಸ್ಯ ಎಂ,ಆರ್ ತೀರ್ಥಕುಮಾರ್ ಹಾಗೂ ಪ್ರಸನ್ನ ಕುಮಾರ್ ಮಕ್ಕಳಿಗೆ ಪೆÇೀಲಿಯೋ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು. ಆಶಾ ಕಾರ್ಯಕರ್ತೆ, ಹೇಮಾವತಿ, ರಾಧ, ಅಂಗನವಾಡಿ ಕಾರ್ಯಕರ್ತೆ ವೇದಕುಮಾರಿ, ಸಹಾಯಕಿ ಇದ್ದರು, ಅದೆ ರೀತಿಯಲ್ಲಿ ಆಲೂರು ಆರೋಗ್ಯ ಕೇಂದ್ರ, ಮುಳ್ಳುರು, ಶನಿವಾರಸಂತೆ, ಕೊಡ್ಲಿಪೇಟೆ ಆರೋಗ್ಯ ಕೇಂದ್ರ ಹಾಗೂ ಕೊಡ್ಲಿಪೇಟೆ ಬಸ್ ನಿಲ್ದಾಣದಲ್ಲೂ ಪೆÇೀಲಿಯೋ ಲಸಿಕ ಕೇಂದ್ರವನ್ನು ತೆರೆದು ಪೆÇೀಲಿಯೋ ಲಸಿಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲಾಯಿತು. ಎಲ್ಲಾ ಕೆಂದ್ರಗಳಲೂ,್ಲ ಆಯಾ ವ್ಯಾಪ್ತಿಯ ಜನಪ್ರತಿನಿದಿಗಳು ಪಾಲ್ಗೊಂಡಿದ್ದರು.