ಕುಶಾಲನಗರ, ಏ. 3: ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್‍ನ ಸುವರ್ಣ ಭವನದಲ್ಲಿ ಕಾಲೇಜು ಪ್ರಾಂಶುಪಾಲ ಎಚ್.ವಿ.ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಿತು.

ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಬಿ.ಎಸ್.ಲೋಕೇಶ್‍ಸಾಗರ್, ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಕೌಶಲ್ಯಗಳೊಂದಿಗೆ ತಮ್ಮನ್ನು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹಳೆಯ ವಿದ್ಯಾರ್ಥಿಯೂ ಆಗಿರುವ ಕಿರುತೆರೆ ಕಲಾವಿದ ನಾಗೇಶ್ ಮಾತನಾಡಿ, ಡಿಪ್ಲೋಮ ಕಾಲೇಜುಗಳ ಪೈಕಿ ರಾಜ್ಯದಲ್ಲಿ ಉತ್ತಮ ಕಾಲೇಜು ಎಂಬ ಹೆಗ್ಗಳಿಕೆಯಿದ್ದು ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಸತತ ಅಭ್ಯಾಸ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಂಡು ಉತ್ಸಾಹದಿಂದ ಪರೀಕ್ಷೆಯನ್ನು ಎದುರಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಾಂಶುಪಾಲ ಎಚ್.ವಿ.ಶಿವಪ್ಪ ಮಾತನಾಡಿ, ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಚಟುವಟಿಕೆಗಳಿಗೆ ಪೂರಕವಾಗಿ ಸುವರ್ಣ ಭವನ ನಿರ್ಮಿಸಲಾಗಿದೆ ಎಂದರು. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ ಎಂದರು.

ಸರಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್.ವಸಂತಕುಮಾರ್, ಕಾವೇರಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್, ಕಾರ್ಯದರ್ಶಿ ಎನ್.ಎಸ್.ಲೋಕೇಶ್, ಸಲಹೆ ಗಾರರಾದ ಯೋಗಾನಂದ, ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರಾದ ಕುಮಾರ್, ನಾಗರಾಜ್, ಕಂಬಾರ್ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಬಿ.ಸನತ್‍ಕುಮಾರ್, ಉಪಾಧ್ಯಕ್ಷ ಬಿ.ಪುನೀತ್ ಮತ್ತಿತರರು ಇದ್ದರು.

ವಿದ್ಯಾರ್ಥಿ ಸಂಘದ ವತಿಯಿಂದ ಪ್ರಾಂಶುಪಾಲ ಎಚ್.ವಿ.ಶಿವಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉಪನ್ಯಾಸಕರಾದ ಜಡೇಸ್ವಾಮಿ, ಸುನೀತ, ಸ್ಮಿತಾ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಕೆ.ಎಸ್.ಶಾಲಿನಿ ತಂಡ ಕಾರ್ಯಕ್ರಮ ನಿರೂಪಿಸಿದರು.