ಸೋಮವಾರಪೇಟೆ, ಏ. 3: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರುಗಳ ಆಶ್ರಯದಲ್ಲಿ ಅಂತಾರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಮೂವರು ಶಿಕ್ಷಕರನ್ನು ಸನ್ಮಾನಿಸಲಾಯಿತು.

ಮಡಿಕೇರಿ ಬಿಆರ್‍ಸಿ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಇಒ ಚಾರುಲತಾ ಸೋಮಲ್ ಅವರು, ತಾಲೂಕಿನ ದೊಡ್ಡಮಳ್ತೆ ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ಜ್ಯೋತಿ, ಪೊನ್ನಂಪೇಟೆ ಸ.ಹಿ.ಪ್ರಾ. ಶಾಲೆಯ ಶಿಕ್ಷಕ ರವಿ, ಮೂರ್ನಾಡು ಸ.ಹಿ.ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸರೋಜ ಅವರು ಗಳನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು, ಸಂಘದ ಜಿಲ್ಲಾಧ್ಯಕ್ಷ ಚೇತನ್, ಗೌರವಾಧ್ಯಕ್ಷ ಯೋಗೇಶ್, ಉಪಾಧ್ಯಕ್ಷೆ ರೇಖಾ, ಕಾರ್ಯದರ್ಶಿ ರಮಾನಂದ, ತಾಲೂಕು ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.