ಮಡಿಕೇರಿ, ಏ. 2: ಇಲ್ಲಿನ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ಶ್ರೀ ರಾಮನವಮಿ ಆಚರಣೆಯೊಂದಿಗೆ, ನಗರದ ಮುಖ್ಯ ಬೀದಿಗಳಲ್ಲಿ ತಾ. 5 ರಂದು ಮೆರವಣಿಗೆ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 5 ಗಂಟೆಗೆ ದೇವಾಲಯ ಸನ್ನಿಧಿಯಲ್ಲಿ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ಪುಷ್ಪÀ ಹಾಗೂ ವಸ್ತ್ರಾಲಂಕಾರ ಸೇವೆಗಳು ನಡೆಯಲಿದ್ದು, ಬೆಳಿಗ್ಗೆ 8 ಗಂಟೆಗೆ ಉತ್ಸವ ಮೂರ್ತಿಯ ಮೆರವಣಿಗೆ ಪ್ರಾರಂಭಗೊಳ್ಳಲಿದೆ.

ಅಲಂಕೃತ ರಥದಲ್ಲಿ ಕಲಾ ತಂಡಗಳು, ಭಜನೆ, ಕಲಶ ಸಹಿತ ಮಹಿಳೆಯರೊಂದಿಗೆ ಚಂಡೆವಾದ್ಯ ಸಹಿತ ದೇವರ ಉತ್ಸವ ಮೂರ್ತಿ ಮೆರವಣಿಗೆ ಬಳಿಕ ಮಧ್ಯಾಹ್ನ ಮಹಾ ಪೂಜೆ ನೆರವೇರಿಸಿ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕ ಅನ್ನದಾನ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆ ತಿಳಿಸಿದೆ.

ಸಂಜೆ ಜ್ಯೋತಿ ಯುವಕ ಸಂಘದಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ. ಈ ಪ್ರಯುಕ್ತ ಇಂದು ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.