ಸೋಮವಾರಪೇಟೆ,ಏ.4: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾ. 5 ರಂದು (ಇಂದು) ಇಲ್ಲಿನ ಸ್ತ್ರೀಶಕ್ತಿ ಭವನದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್‍ರಾಂ ಅವರ 110ನೇ ಜನ್ಮ ದಿನಾಚರಣೆ ಸಮಾರಂಭ ನಡೆಯಲಿದೆ

ಶಾಸಕ ಎಂ.ಪಿ ಅಪ್ಪಚ್ಚುರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸಲಿ ದ್ದಾರೆ.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪರಾಜೇಶ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ.ಪಂ. ಅಧ್ಯಕ್ಷೆ ಬಿ.ಎಸ್. ವಿಜಯಲಕ್ಷ್ಮೀ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮ ಗೋಪಾಲ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಜೆ.ಆರ್. ಪಾಲಾಕ್ಷ ಭಾಗವಹಿಸಲಿದ್ದಾರೆ.