ವೀರಾಜಪೇಟೆ, ಏ. 4: ಕೂರ್ಗ್ ಹಿಂದೂ ಮಲೆಯಾಳಿ ಅಸೋಸಿಯೇಷನ್ ವತಿಯಿಂದ ಕೊಡಗಿನ ಹಿಂದೂ ಮಲೆಯಾಳಿ ಜನಾಂಗಕ್ಕೆ ಸೀಮಿತಗೊಂಡಂತೆ 2ನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಮೇ 5ರಿಂದ 7ರವರೆಗೆ ವೀರಾಜಪೇಟೆ ಸಂತ ಅನ್ನಮ್ಮ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್‍ನ ಜಿಲ್ಲಾ ಸಮಿತಿ ಸಲಹೆಗಾರ ವಿ.ಕೆ ಲೋಕೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವೀರಾಜಪೇಟೆ ಕ್ರಿಕೆಟ್ ಪಂದ್ಯಾಟ ಸಮಿತಿಯ ಅಧ್ಯಕ್ಷರನ್ನಾಗಿ ಎನ್. ಎಸ್. ದರ್ಶನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಪಂದ್ಯಾಟದ ಉಸ್ತುವಾರಿಯನ್ನು ಸಮಿತಿ ವಹಿಸಲಿದೆ. ಕಳೆದ ಬಾರಿಯ ಪಂದ್ಯಾಟದಲ್ಲಿ 47 ತಂಡಗಳು ಭಾಗವಹಿಸಿದ್ದವು. ಈ ಬಾರಿ 60 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಅಸೋಸಿಯೇಷನ್‍ನ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಬಿ. ಹರ್ಷವರ್ಧನ್ ಮಾತನಾಡಿ, ಗ್ರಾಮಾಂತರ ಮಟ್ಟದಲ್ಲಿಯೂ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಇಂತಹ ಪಂದ್ಯಾಟ ಸಹಕಾರಿಯಾಗಲಿದೆ ಎಂದು ಹೇಳಿದರು.

ಉಪಾಧ್ಯಕ್ಷ ನಿದೀಶ್ ಮಾತನಾಡಿ, ಕ್ರಿಕೆಟ್ ಪಂದ್ಯಾಟದ ಜೊತೆಯಲ್ಲಿಯೇ ಸಮುದಾಯದ ಪುರುಷರು ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ, ಮ್ಯೂಸಿಕಲ್ ಛೇರ್, ಛದ್ಮವೇóಷ, ಇತರ ಆಟೋಟಗಳನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸಂಘಟನಾ ಕಾರ್ಯದರ್ಶಿ ರತೀಶ್, ಸಹಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.