ಸುಂಟಿಕೊಪ್ಪ, ಏ. 4: ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಎರಡನೇ ಹಂತದ ಸಿವಿಲ್ ಕಾಮಗಾರಿಗಳಾದ ತಡೆಗೋಡೆ, ಸಿಬ್ಬಂದಿ ವಸತಿ ಗೃಹಗಳು ಹಾಗೂ ಕ್ರೀಡಾಂಗಣಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಕುಮುದಧರ್ಮಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ತಾಲೂಕು ಪಂಚಾಯಿತಿ ಸದಸ್ಯೆ ಮಣಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಹಾಗೂ ಕಾಲೇಜಿನ ಪ್ರಾಂಶುಪಾಲೆ ನಿತಾ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಹಾಜರಿದ್ದರು.