ಮಡಿಕೇರಿ,, ಏ. 5: ನೆಲ್ಯಹುದಿಕೆÉೀರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಾವಣೆÉಗಳು ಗಬ್ಬೆದ್ದು ನಾರುತ್ತಿದ್ದು, ಅಶುಚಿತ್ವದ ವಾತಾವರಣದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆಯೆಂದು ಆತಂಕ ವ್ಯಕ್ತಪಡಿಸಿರುವ ಸ್ವಚ್ಛತೆ, ಪರಿಸರ ಹಾಗೂ ನೈರ್ಮಲ್ಯ ಜಾಗೃತಿ ಸಮಿತಿ, ಗ್ರಾಮ ಪಂಚಾಯಿತಿಗೆ ನೀಡಲಾಗಿರುವ ನಿರ್ಮಲ ಗ್ರಾಮ ಪ್ರಶಸ್ತಿಯನ್ನು ಸರಕಾರಕ್ಕೆ ಹಿಂದಿರುಗಿಸಬೇಕೆಂದು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಹೊಸಮನೆ ವಸಂತ ಕುಮಾರ್, ಕಸ ವಿಲೇವಾರಿ ಬಗ್ಗೆ ಕಾಳಜಿ ತೋರದ ಗ್ರಾಮ ಪಂಚಾಯಿತಿ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ ಎಂದು ಆರೋಪಿಸಿದರು. ಗ್ರಾಮದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಎಲ್ಲಾ ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್‍ಗಳನ್ನು ಬಳಸಲಾಗುತ್ತಿದೆ. ಚರಂಡಿಯಲ್ಲಿ ಶೌಚಾಲಯದ ನೀರು ಹರಿಯುತ್ತಿದ್ದು, ಈ ನೀರು ಕಾವೇರಿ ನದಿಯನ್ನು ಸೇರುತ್ತಿರುವದರಿಂದ ರೋಗ ಭೀತಿ ಎದುರಾಗಿದೆ.

ಕಳೆÉದ ವರ್ಷ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಲೇರಿಯ ರೋಗ ಕಾಣಿಸಿಕೊಂಡಿತ್ತು. ಈ ವರ್ಷವೂ ಕಾವೇರಿ ನದಿ ಕಲುಷಿತಗೊಂಡು ಕಪÀÅ್ಪ್ಪ ಬಣ್ಣಕ್ಕೆ ಪರಿವರ್ತನೆಯಾಗಿದ್ದು, ಈ ನೀರನ್ನು ಬಳಸುವವರಿಗೆ ಚರ್ಮದ ಕಾಯಿಲೆ ಕಾಡಿದೆ. ನೆಲ್ಯಹುದಿಕೇರಿ ಒಂದು ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದ್ದು, ಅಕ್ಕಪಕ್ಕದ ಗ್ರಾಮಗಳ ನಿವಾಸಿಗಳು ಕೂಡ ಕಸದ ರಾಶಿಯನ್ನು ತಂದು ಹಾಕುತ್ತಿದ್ದಾರೆ. ಎಲ್ಲೆಂದರಲ್ಲಿ ಮೀನು ಮಾಂಸದ ತ್ಯಾಜ್ಯ ಬಿದ್ದಿದ್ದು, ನೊಣಗಳ ಹಾವಳಿ ಹೆಚ್ಚಾಗಿದೆ ಎಂದರು.

ಇದರಿಂದ ಹೊಟೇಲ್‍ಗಳ ವ್ಯಾಪಾರ ವಹಿವಾಟಿಗೂ ಅಡ್ಡಿಯಾಗುತ್ತಿದ್ದು, ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆಗಳಿದೆ ಎಂದು ವಸಂತ ಕುಮಾರ್ ತಿಳಿಸಿದರು.

ಇತ್ತೀಚೆಗೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಗೆ ನಿರ್ಮಲ ಗ್ರಾಮ ಪ್ರಶಸ್ತಿ ಲಭ್ಯವಾಗಿದ್ದು, ಗ್ರಾಮದಲ್ಲಿ ಅಶುಚಿತ್ವದ ವಾತಾವರಣ ಇರುವದರಿಂದ ಈ ಪ್ರಶಸ್ತಿಯನ್ನು ಹಿಂದಿರುಗಿಸುವದು ಸೂಕ್ತವೆಂದು ಅಭಿಪ್ರಾಯಪಟ್ಟರು.

ಕಂದಾಯ ಅಧಿಕಾರಿಗಳು ಕಸ ವಿಲೇವಾರಿಗೆ ಸೂಕ್ತ ಜಾಗವನ್ನು ಗುರುತಿಸಿ ನೀಡಬೇಕೆಂದು ಒತ್ತಾಯಿಸಿದ ಅವರು, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಡಳಿತ ಶುಚಿತ್ವಕ್ಕೆ ಆದ್ಯತೆ ನೀಡದಿದ್ದಲ್ಲಿ ಪಕ್ಷಾತೀತವಾಗಿ ತೀವ್ರ ರೀತಿಯ ಹೋರಾಟವನ್ನು ರೂಪಿಸುವದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಎ.ಕೆ.ಅಬ್ದುಲ್ಲ, ಉಪಾಧ್ಯಕ್ಷರಾದ ಗ್ರೇಸಿ ಮಣಿ, ಪ್ರಮುಖರಾದ ಮಣಿ ಮೊಹಮ್ಮದ್, ಟಿ.ಸಿ. ಅಶೋಕ್ ಹಾಗೂ ಫ್ರಾನ್ಸಿಸ್ ಉಪಸ್ಥಿತರಿದ್ದರು.