ಮಡಿಕೇರಿ, ಏ. 7 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಶುಕ್ರವಾರ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಖಿನ್ನತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಜಿ.ಎಂ.ಪ್ರಕಾಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಮುಖ್ಯಸ್ಥರಾದ ಡಾ.ಬಿ.ಜೆ. ಮಹೇಂದ್ರ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯದ ಭಕ್ತವತ್ಸಲ ನಾಟಕ ಮಂಡಳಿ ವತಿಯಿಂದ ಮಾನಸಿಕ ಖಿನ್ನತೆ ಬಗ್ಗೆ ಅರಿವು ಮೂಡಿಸುವ ನಾಟಕ ಪ್ರದರ್ಶನ ಮಾಡಿದರು. ಖಿನ್ನತೆಗೆ ಸಂಬಂಧಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಜಿ.ಎಂ. ಪ್ರಕಾಶ್ ಬಹುಮಾನ ವಿತರಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ರೋಪೇಶ್ ಗೋಪಾಲ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಶರವಣ ಇ. ವಂದಿಸಿದರು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ. ಕಾರ್ಯಪ್ಪ, ಮಾನಸಧಾರ ಮಾನಸಿಕ ರೋಗಿಗಳ ಹಗಲು ಆರೈಕೆ ಕೇಂದ್ರದ ಸಂಯೋಜಕ ವಿಶ್ವನಾಥ್ ಸಿ.ವಿ., ಸಹಾಯಕ ಪ್ರಾಧ್ಯಾಪಕ ಡಾ. ನರಸಿಂಹ, ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.