ಮಡಿಕೇರಿ, ಏ.4 :ಕಳೆದ ಹಲವು ತಿಂಗಳುಗಳಿಂದ ನಾಪೋಕ್ಲು ಪೊಲೀಸ್ ಠಾಣಾಧಿಕಾರಿಯ ಕರ್ತವ್ಯ ಲೋಪ ಹಾಗೂ ಸಜ್ಜನ ವಿರೋಧಿ ಧೋರಣೆಗಳ ವಿರುದ್ಧ ಗ್ರಾಮಸ್ಥರು ದೂರುಗಳನ್ನು ನೀಡುತ್ತಾ ಬಂದಿದ್ದರೂ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಠಾಣಾಧಿಕಾರಿಯ ವಿರುದ್ಧ ಯಾವದೇ ಶಿಸ್ತು ಕ್ರಮವನ್ನು ತೆಗೆದುಕೊಂಡಿಲ್ಲ. ಮಾಹಿತಿ ಹಕ್ಕು ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಎ .ಹ್ಯಾರಿಸ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಐಜಿ ಅವರಿಗೆ ದೂರು ಸಲ್ಲಿಸಿದ್ದು, ಠಾಣಾಧಿಕಾರಿ ಯನ್ನು ಅಮಾನತು ಗೊಳಿಸಬೇಕು ಅಥವಾ ನಾಪೋಕ್ಲಿನಿಂದ ವರ್ಗಾವಣೆ ಗೊಳಿಸಬೇಕೆಂದು ಒತ್ತಾಯಿಸಿರು ವದಾಗಿ ತಿಳಿಸಿದರು. ಮುಂದಿನ 15 ದಿನಗಳ ಒಳಗೆ ಈ ಕ್ರಮ ಕೈಗೊಳ್ಳದಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವದು, ಅಲ್ಲದೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಾಗು ವದೆಂದು ತಿಳಿಸಿದರು. ಸುದ್ದಿಗೋಷ್ಠಿ ಯಲ್ಲಿ ನಾಪೋಕ್ಲು ಗ್ರಾ.ಪಂ. ಉಪಾಧ್ಯಕ್ಷ ಕಾಳೆಯಂಡ ಸಾಬ ತಿಮ್ಮಯ್ಯ ಹಾಗೂ ಸದಸ್ಯ ಚೋಕಿರ ರೋಷನ್ ಉಪಸ್ಥಿತರಿದ್ದರು.