ಗೋಣಿಕೊಪ್ಪಲು, ಏ. 6: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೀನಿವಾಡದಲ್ಲಿ 2ನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಅವಿಷ್ಕಾರ್ ಅಭಿಯಾನ್ ಯೋಜನೆಯಡಿ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸ ಲಾಗಿತ್ತು. ಈ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಉದ್ಘಾಟಿಸಿದರು. ನೆಲ್ಲೀರ ಚಲನ್ ಕುಮಾರ್ ಉದ್ಘಾಟಿಸಿ ಮಾತನಾಡಿ. ಮಕ್ಕಳಲ್ಲಿ ಗಣಿತ ಮತ್ತು ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ಶಿಕ್ಷಕರು ಹೆಚ್ಚು ಪ್ರಯತ್ನಿಸಬೇಕು ಎಲ್ಲಾ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಅದಕ್ಕೆ ಪೋಷಕರು ಸಹಕಾರ ನೀಡಬೇಕು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭ ಶಾಲೆಗೆ ಧ್ವನಿವರ್ಧಕವನ್ನು ಉದಾರವಾಗಿ ನೀಡಿದರು. ಕೊಡಗು ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಭಾಗ್ಯಲಕ್ಷಿ ಮಾತನಾಡಿ, ಸರ್ಕಾರದ ಯೋಜನೆಗಳಾದ ಪ್ರತಿಭಾ ಕಾರಂಜಿ, ಕಲಿಕೋತ್ಸವ, ಇವುಗಳ ಜೊತೆಗೆ ರಾಷ್ಟ್ರೀಯ ಅವಿಷ್ಕಾರ್ ಅಭಿಯಾನ್ ಕೂಡ ಒಂದು ಅದನ್ನು ಈ ಶಾಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಳಿಸಿದ್ದಾರೆ, ವಿದ್ಯಾರ್ಥಿಗಳು ಉತ್ತಮವಾಗಿ ಪ್ರದರ್ಶನ ಮಾಡಿರುತ್ತಾರೆ ಎಂದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಮಾರ್ಗದರ್ಶಕಿ ಹುದಿಕೇರಿ ಶಾಲೆಯ ಮುಖ್ಯ ಶಿಕ್ಷಕಿ ಮೋಹನ್ ಕುಮಾರಿ ಅವರು ಪ್ರಸ್ತುತ ವರ್ಷದ 8ನೇ ತರಗತಿಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸಕೀನ, ಸದಸ್ಯ ಸಾದುಲಿ, ಸಮೂಹ ಸಂಪನ್ಮೂಲ ವ್ಯಕ್ತಿ ಎ.ಕೆ. ರವೀಶ್, ಮುಖ್ಯ ಶಿಕ್ಷಕ ವಾಮನ ಟಿ.ಕೆ, ಎಲ್ಲಾ ಸಹ ಶಿಕ್ಷಕರು ಹಾಗೂ ಎಸ್.ಡಿ.ಎಂ.ಸಿ. ಸದಸ್ಯರುಗಳು ಹಾಜರಿದ್ದರು.