ನಾಪೆÇೀಕ್ಲು, ಏ. 8 : ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಉತ್ತಮ ಪ್ರತಿಭೆಯಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಪೆÇೀಷಕರು ಸರಕಾರಿ ಕಾಲೇಜು ಎಂಬ ಕೀಳರಿಮೆ ಬಿಟ್ಟು ತಮ್ಮ ಮಕ್ಕಳನ್ನು ಸರಕಾರಿ ಕಾಲೇಜಿಗೆ ದಾಖಲಾತಿ ಮಾಡಲು ಕ್ರಮಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ. ಮಾಧವ ಎಂ.ಕೆ, ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರುಳಿ ಕರುಂಬಮ್ಮಯ್ಯ, ಕಾಲೇಜು ಸಮಿತಿಯ ಉಪಾಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಮಾತನಾಡಿದರು.

ಅಧ್ಯಕ್ಷತೆಯನ್ನು ಪ್ರಬಾರ ಪ್ರಾಂಶುಪಾಲ ಎನ್.ಪಿ. ಸತೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಡಾ. ಕಾವೇರಿ ಪ್ರಕಾಶ್, ಕನ್ನಿಕಾ ಡಿ ಇದ್ದರು.