ಭಾಗಮಂಡಲ, ಏ. 8: ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. 9 ರಿಂದ (ಇಂದಿನಿಂದ) ತಾ. 11ರ ವರೆಗೆ 8ನೆ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮಾನಭ ತಂತ್ರಿಯವರ ಉಪಸ್ಥಿತಿಯಲ್ಲಿ ಜರುಗಲಿದೆ.
ತಾ. 9 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಹೋಮ, ಶ್ರೀ ಭಗಂಡೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಬಿಂಬ ಶುದ್ಧಿ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಸಾನಿಧ್ಯ ಕಲಶಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ, ಸಂಜೆ 6 ಗಂಟೆಯಿಂದ ತಾಯಂಬಕ, ಮಹಾಪೂಜೆ, ರಾತ್ರಿ 9 ಗಂಟೆಯಿಂದ ದೇವರ ನೃತ್ಯ ಉತ್ಸವ ನಡೆಯಲಿದೆ.
ತಾ. 10 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಏಕಾದಶ ರುದ್ರಾಭಿಷೇಕ, ಬಿಂಬ ಶುದ್ಧಿ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಸಾನಿಧ್ಯ ಕಲಶಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ, ಸಂಜೆ 6 ಗಂಟೆಯಿಂದ ತಾಯಂಬಕ, ಮಹಾಪೂಜೆ, ರಾತ್ರಿ 9 ಗಂಟೆಯಿಂದ ದೇವರ ನೃತ್ಯ ಉತ್ಸವ, ತಾ. 11 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಹೋಮ, ಶ್ರೀ ಮಹಾವಿಷ್ಣು ದೇವರಿಗೆ ಪವಮಾನ ಅಭಿಷೇಕ, ಬಿಂಬ ಶುದ್ಧಿ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಸಾನಿಧ್ಯ ಕಲಶಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ, ಸಂಜೆ 6 ಗಂಟೆಯಿಂದ ತಾಯಂಬಕ, ಮಹಾಪೂಜೆ, ರಾತ್ರಿ 9 ಗಂಟೆಯಿಂದ ದೇವರ ನೃತ್ಯ ಉತ್ಸವ ಜರುಗಲಿದೆ.