ಸೋಮವಾರಪೇಟೆ, ಏ. 7: ತಾಲೂಕಿನ ಹುದುಗೂರು ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮ ತಾ. 10 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 8 ಗಂಟೆಗೆ ದೇವಾಲಯದಲ್ಲಿ ಗಣಪತಿ ಮತ್ತು ಮೃತ್ಯುಂಜಯ ಹೋಮ, ಪ್ರಧಾನ ದೇವರು ಮತ್ತು ಉಪದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಸೇರಿದಂತೆ ಇತರ ಪೂಜೆಗಳು ನೆರವೇರಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ 7 ಗಂಟೆಗೆ ದೀಪಾಲಂಕಾರ, ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.