ಅಮ್ಮತ್ತಿ: ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ. ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನಗೊಳಿಸುವ ಬಗ್ಗೆ ವಿಶೇಷ ಗ್ರಾಮ ಸಭೆಯನ್ನು ತಾ. 10 ರÀÀಂದು 11.30 ಗಂಟೆಗೆ ಅಮ್ಮತ್ತಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎನ್. ತಾಯಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮರಗೋಡು: ಕಸ್ತೂರಿ ರಂಗನ್ ವರದಿ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ಹೊಸ್ಕೇರಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳ ವಿಶೇಷ ತುರ್ತು ಗ್ರಾಮಸಭೆ ತಾ. 10 ರಂದು ಅಪರಾಹ್ನ 2 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಪಿ.ಎನ್. ಮಮತಾ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಮಾಡು: ಕಾರ್ಮಾಡು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಡಾ. ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನಗೊಳಿಸುವ ಬಗ್ಗೆ ವಿಶೇಷ ಗ್ರಾಮ ಸಭೆಯನ್ನು ತಾ. 10 ರಂದು ಅಪರಾಹ್ನ 3 ಗಂಟೆಗೆ ಕಾರ್ಮಾಡು ಗ್ರಾಮದ ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲ್ಲಿ ಕಾರ್ಮಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಚಿರ ರೋನ ಭೀಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.