ಮಡಿಕೇರಿ, ಏ. 9: ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಿದ್ಯಾರ್ಥಿಗಳು ಉತ್ತಮ ಜ್ಞಾನ ಪಡೆದು ಬಲಿಷ್ಠ ರಾಷ್ಟ್ರ ನಿರ್ಮಿಸಲು ಕರೆ ನೀಡಿದರು.

ಮಹಿಳಾ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಈಗಾಗಲೇ ರೂ. 2 ಕೋಟಿ ಹಣ ಬಿಡುಗಡೆಯಾಗಿದ್ದು ಆ ಹಣ ಹಾಗೆಯೇ ಉಳಿದಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಾದರೂ ಜಾಗ ಪರಿಶೀಲಿಸಿ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುವದು ಎಂದು ಭರವಸೆ ನೀಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಾಧವ ಎಂ.ಕೆ. ಮಾತನಾಡಿ, ಕಾಲೇಜು ವಾರ್ಷಿಕೋತ್ಸವ ಎಂದರೆ ಕಾಲೇಜಿನ ಒಂದು ದಿನದ ಜಾತ್ರೆ ಇದ್ದಂತೆ.

ಈಗ ವಿದ್ಯಾರ್ಥಿಗಳು ಹೆಚ್ಚು ಸೆಲ್ಫಿ ತೆಗೆದುಕೊಳ್ಳುವಲ್ಲಿ ತೊಡಗಿರುತ್ತಾರೆ. ಸೆಲ್ಪಿ ಎಂದರೆ ನಮ್ಮ ವ್ಯಕ್ತಿತ್ವದ ಸೆಲ್ಫಿ ತೆಗೆಯಬೇಕು, ನನ್ನ ಸಾಧನೆ ಏನು ಎಂಬದನ್ನು ಅರ್ಥ ಮಾಡಿಕೊಳ್ಳಬೇಕು. ಇದನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು. ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕøತಿಕ, ಸಾಹಿತ್ಯ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ವಿಜಯಶಾಲಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ಜೆನಿಫರ್ ಲೋಲಿಟ ಸಿ., ಸಹಾಯಕ ಪ್ರಾಧ್ಯಾಪಕ ದಯಾನಂದ ಕೆ.ಸಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಇತರರು ಪಾಲ್ಗೊಂಡಿದ್ದರು.