ಮಡಿಕೇರಿ, ಏ. 9: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ ಅವರು ತಾ. 7 ರಂದು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಗ್ರಾಮದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಗ್ರಾಮ ಪಂಚಾಯಿತಿ ಪಿ.ಡಿ.ಓ. ಅವರಿಂದ ಗ್ರಾಮ ಪಂಚಾಯಿತಿಯ ಅನುದಾನಗಳ ಬಗ್ಗೆ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ಮಾಡಿದರು. ಇದೇ ಸಮಯದಲ್ಲಿ ಸುಮಾರು 400 ರಿಂದ 500 ಮನೆಗಳಿಗೆ ಇನ್ನೂ ಮನೆ ಕಂದಾಯ ನಿಗದಿಪಡಿಸದಿರುವದು ಕಂಡು ಬಂದಿತು. ಈ ಬಗ್ಗೆ ತಕ್ಷಣ ಕ್ರಮ ವಹಿಸಿ ಕಂದಾಯ ನಿಗದಿಪಡಿಸಲು ಪಿ.ಡಿ.ಓ. ಅವರಿಗೆ ಆದೇಶಿಸಿದರು. ಕಸ ವಿಲೇವಾರಿ ಸಮಸ್ಯೆ ಎದ್ದು ಕಾಣುತ್ತಿದ್ದು, ಈಗಾಗಲೇ ಇರುವ ಜಾಗವು ಜನ ನಿಬಿಡ ಪ್ರದೇಶ ವಾಗಿದ್ದು, ಬೇರೆ ಸ್ಥಳವನ್ನು ಸೂಚಿಸಲು ಕಂದಾಯ ಅಧಿಕಾರಿಗಳಿಗೆ ಸಲಹೆ ನೀಡಿದರು. ರಸ್ತೆ ಬದಿ ಮಾಂಸ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಸಾರ್ವಜನಿಕರು ಮನವಿ ಸಲ್ಲಿಸಿದರು. ಇದಕ್ಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ ಕ್ರಮವಹಿಸುವದಾಗಿ ತಿಳಿಸಿದರು.

ನಂತರ ರಸ್ತೆಗಳು, ಕುಡಿಯುವ ನೀರು, ಕಾವೇರಿ ನದಿ ಸ್ವಚ್ಛತೆ ಬಗ್ಗೆ ಮುಂತಾದ ಸಮಸ್ಯೆಗಳನ್ನು ಆಲಿಸಿದರು. ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಪ್ರಗತಿ ವಿವರ ಪಡೆದರು.

ನಂಜರಾಯಪಟ್ಟಣ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಪರಿಶೀಲಿಸಿ, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಗ್ರಾಮದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಗ್ರಾಮ ಪಂಚಾಯಿತಿ ಪಿ.ಡಿ.ಓ. ಅವರಿಂದ ಗ್ರಾಮ ಪಂಚಾಯಿತಿಯ ಅನುದಾನಗಳ ಬಗ್ಗೆ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ಮಾಡಿದರು.

ಎಂ.ಪಿ. ಸುನಿಲ್ ಸುಬ್ರಮಣಿ ಅವರು ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಪರಿಶೀಲಿಸಿ, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕ ರೊಂದಿಗೆ ಗ್ರಾಮದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಗ್ರಾಮ ಪಂಚಾಯಿತಿ ಪಿ.ಡಿ.ಓ. ಅವರಿಂದ ಗ್ರಾಮ ಪಂಚಾಯಿತಿಯ ಅನುದಾನ ಗಳ ಬಗ್ಗೆ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ಮಾಡಿದರು.