ಕರಿಕೆ, ಏ. 9: ಕರಿಕೆ ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ಸುಮಾರು ರೂ. ಒಂದೂವರೆ ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿ ಪೂಜೆಯನ್ನು ಶಾಸಕ ಕೆ.ಜಿ. ಬೋಪಯ್ಯ ನೆರವೇರಿಸಿದರ ಚೆತ್ತುಕಾಯ ಶಾಸ್ತಾವು ದೇವಸ್ಥಾನ ರಸ್ತೆಯ ಡಾಮರೀಕರಣವನ್ನು ಉದ್ಘಾಟಿಸಿದರು. ಸುಮಾರು ರೂ. 8 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಫಾರೆಸ್ಟ್ ಐಬಿ ರಸ್ತೆ, ಮಡೇಕಾನ ಕಾಲೋನಿ ಕಾಂಕ್ರೀಟ್ ರಸ್ತೆ, ಕುಂಡತ್ತಿಕಾನ ಗಿರಿಜನ ಕಾಲೋನಿ ರಸ್ತೆಯ ಕಾಂಕ್ರೀಟೀಕರಣಕ್ಕೆ ಭೂಮಿಪೂಜೆ ನೆರವೇರಿಸಿದರು.ಜಿ.ಪಂ. ರೂ. 35 ಲಕ್ಷ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ರೂ. 35 ಲಕ್ಷ, ಗಡಿಪ್ರದೇಶ ಅಭಿವೃದ್ಧಿ ಯೋಜನೆಯ ರೂ. 31 ಲಕ್ಷ, ಲೋಕೋಪಯೋಗಿ ಇಲಾಖೆಯ ವಿಶೇಷ ಘಟಕ ಯೋಜನೆಯ ರೂ. 32 ಲಕ್ಷ ಅನುದಾನದ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು ಮಡಿಕೇರಿ-ಭಾಗಮಂಡಲ- ಕರಿಕೆ- ಪಾಣತ್ತೂರು ಅಂತರ್ರಾಜ್ಯ ರಸ್ತೆಯಾಗಿ ಕೇಂದ್ರ ಸರ್ಕಾರ ಅನುಮೋದಿಸಿದ್ದು, ಇದಕ್ಕೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕೂಡಲೇ ಸರ್ವೆ ಕಾರ್ಯ ಮುಗಿಸುವಂತೆ ಸೂಕ್ತ ನಿರ್ದೇಶನವಿತ್ತಿದ್ದು, ಮುಂದಿನ ಒಂದು ವರ್ಷದ ಒಳಗಾಗಿ ಸರ್ವೆ ಪೂರ್ಣಗೊಂಡು ಕಾಮಗಾರಿ ಆರಂಭಗೊಳ್ಳಲಿದೆ.
ಕೂಡಲೇ ಕೆಲಸ ಆರಂಭಿಸಲು ಕ್ಷೇತ್ರದ ಶಾಸಕನಾಗಿ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದರು.
ಈ ಸಂದರ್ಭ ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಗ್ರಾ.ಪಂ. ಸದಸ್ಯೆ ಉಷಾಕುಮಾರಿ, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಚಂಗಪ್ಪ, ಮಾಜಿ ಗ್ರಾ.ಪಂ. ಅಧ್ಯಕ್ಷ ಹೊಸಮನೆ ಚಂಗಪ್ಪ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಳನ ರವಿ ಹಾಗೂ ಇತರರು ಉಪಸ್ಥಿತರಿದ್ದರು.