ಮಡಿಕೇರಿ, ಏ. 10: ಸ್ಥಳೀಯ ಚಾಮುಂಡೇಶ್ವರಿ ನಗರದ ನಿವಾಸಿ ರವಿಯ ಕೊಲೆ ಪ್ರಕರಣ ಸಂಬಂಧ ಸುಳ್ಯ ಪೊಲೀಸರು ಬಂಧಿಸಿದ್ದ ಮೂವರು ಆರೋಪಿಗಳನ್ನು ಇಂದು ಅಲ್ಲಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಆರೋಪಿಗಳಾದ ಡಾಲು, ಡಿಸ್ಕ್ ಅಲಿಯಾಸ್ ಪ್ರಮೋದ್ ಹಾಗೂ ಹರೀಶನನ್ನು ನ್ಯಾಯಾಧೀಶರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಮೇರೆಗೆ, ಈ ಮೂವರನ್ನು ಮಂಗಳೂರು ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ಸುಳ್ಯ ಪೊಲೀಸರು ಖಚಿತಪಡಿಸಿದ್ದಾರೆ.