ಮಡಿಕೇರಿ, ಏ.10: ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಕೊಡಗು ಜಿಲ್ಲಾ ಪಂಚಾಯತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ವರ್ಗಗಳ ಆಶ್ರಮ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಪ್ರಬಾರ ಜಿಲ್ಲಾಧಿಕಾರಿ ಹಾಗೂ ಕೊಡಗು ಜಿ.ಪಂ.ಸಿಇಒ ಚಾರುಲತಾ ಸೋಮಲ್ ಅವರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಕ್ಕಳಲ್ಲಿ ಸ್ಪರ್ಧಾತ್ಮಕ ಭಾವನೆ ಬೆಳೆಯುತ್ತದೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗಾಗಿ 2-3 ದಿನಗಳ ಕ್ರೀಡಾಕೂಟ ಆಯೋಜಿಸಲಾಗುವದು ಎಂದರು.
ಜಿ.ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ವಿಜು ಸುಬ್ರಮಣಿ ಮಾತನಾಡಿ ಆಶ್ರಮ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಆಯೋಜಿಸಿರುವದು ಸಂತೋಷದ ವಿಷಯ, ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳು ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಪ್ರಕಾಶ್, ಆಶ್ರಮ ಶಾಲೆಯ ಶಿಕ್ಷಕರು ಇತರರು ಇದ್ದರು.