ಶ್ರೀಮಂಗಲ: ಸೂಕ್ಷ್ಮ ಪರಿಸರ ವಲಯ ಯೋಜನೆ ಬಗ್ಗೆ ಜನಾಭಿಪ್ರಾಯದ ನಿರ್ಣಯ ಕೈಗೊಳ್ಳಲು ತಾ. 12 (ನಾಳೆ) ಕುಟ್ಟ ಗ್ರಾ.ಪಂ ವಿಶೇಷ ಗ್ರಾಮ ಸಭೆ ಪೂರ್ವಾಹ್ನ 10.30ಕ್ಕೆ ಇಲ್ಲಿನ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
*ಕೆದಮುಳ್ಳೂರು: ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ತಾ. 12 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೊಡಗಿನ ಸಾಧಕ-ಬಾಧಕಗಳ ಕುರಿತು ವಿಸ್ತøತವಾಗಿ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗುವದು ಎಂದು ಪಂಚಾಯಿತಿ ಪ್ರಕಟಣೆ ತಿಳಿಸಿದೆ.
ಹಾಕತ್ತೂರು: ಹಾಕತ್ತೂರು ಗ್ರಾ.ಪಂ. ವ್ಯಾಪ್ತಿಯ ಹಾಕತ್ತೂರು ಮತ್ತು ಕಗ್ಗೋಡ್ಲು ಗ್ರಾಮಗಳಿಗೆ ಸಂಬಂಧಿಸಿದಂತೆ ಸರಕಾರದ ಆದೇಶದಂತೆ ಪಶ್ಚಿಮಘಟ್ಟದ ಸಂರಕ್ಷಣೆಗಾಗಿ ಡಾ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬೇಕೇ ಬೇಡವೇ ಎಂಬ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸ್ವೀಕರಿಸಲು ತಾ. 12 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾ.ಪಂ. ಕಚೇರಿಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಎಂ.ಆರ್. ಶಾರದ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಕರಿಕೆ: ಸೂಕ್ಷ್ಮ ಪರಿಸರ ತಾಣದ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ಕರಿಕೆ ಗ್ರಾ.ಪಂ. ವ್ಯಾಪ್ತಿಯ ವಿಶೇಷ ಗ್ರಾಮ ಸಭೆ ಗ್ರಾ.ಪಂ. ಅಧ್ಯಕ್ಷÀ ಎನ್. ಬಾಲಚಂದ್ರ ನಾಯರ್ ಅವರ ಅಧ್ಯಕ್ಷತೆಯಲ್ಲಿ ತಾ. 12 ರಂದು ಪೂರ್ವಾಹ್ನ 11 ಗಂಟೆಗೆ ಕರಿಕೆ ಗ್ರಾ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.