ಮಡಿಕೇರಿ, ಏ. 11: ಜಿಲ್ಲಾಡಳಿತ, ಜಿ.ಪಂ., ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 14 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಇತರರು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಸುದರ್ಶನ ವೃತ್ತದ ಬಳಿಯಿಂದ ಕಾವೇರಿ ಕಲಾಕ್ಷೇತ್ರದವರೆಗೆ ಮೆರವಣಿಗೆ ನಡೆಯಲಿದೆ.