ಮಡಿಕೇರಿ, ಏ. 11: ಕರ್ನಾಟಕ ರಾಜ್ಯ ಸರ್ಕಾರವು ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ಉತ್ತಮ ಗುಣಮಟ್ಟದ ಹಾಲಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿದ್ದು, ಈ ಪ್ರೋತ್ಸಾಹಧನವನ್ನು ಸಂಬಂಧಿಸಿದ ಹಾಲು ಉತ್ಪಾದಕರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಪ್ರಸ್ತುತ ರಾಜ್ಯ ಪಶುಸಂಗೋಪನೆ ಇಲಾಖೆಯ ಆದೇಶದಂತೆ ಪ್ರೋತ್ಸಾಹ ಧನವನ್ನು ಪಡೆಯಲು ಹಾಲು ಉತ್ಪಾದಕರು ತಮ್ಮ ಉಳಿತಾಯ ಖಾತೆಗೆ ಆಧಾರ್ ಜೋಡಣೆಯನ್ನು ಕಡ್ಡಾಯವಾಗಿ ಮಾಡಬೇಕಾಗಿದೆ. ಆಧಾರ್ ಕಾರ್ಡ್ ಜೋಡಣೆಯಾಗದ ಉಳಿತಾಯ ಖಾತೆಗೆ ಹಣ ಜಮೆಯಾಗದ ಒಕ್ಕೂಟಕ್ಕೆ ಬ್ಯಾಂಕ್ನಿಂದ ಹಿಂದಿರುಗಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಹಾಲು ಉತ್ಪಾದಕರು ತಮ್ಮ ಉಳಿತಾಯ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿ ಪ್ರೋತ್ಸಾಹಧನ ಪಡೆದುಕೊಳ್ಳುವಂತೆ ಹಾಸನ ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕರು ಕೋರಿದ್ದಾರೆ.