ಮಡಿಕೇರಿ, ಏ. 13: ಅಶ್ವಿನಿ ಆಸ್ಪತ್ರೆಯಲ್ಲಿ ಮೈಸೂರಿನ ಬೃಂದಾವನ ಆಸ್ಪತ್ರೆಯ ಸಹಯೋಗದೊಂದಿಗೆ ನೂತನವಾಗಿ ತೆರೆದಿರುವ ಐ.ಸಿ.ಯು. ಘಟಕವನ್ನು ತಾ. 16 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಾಗುವದು.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಐ.ಸಿ.ಯು. (ತುರ್ತು ನಿಘಾ ಘಟಕ) ಉದ್ಘಾಟಿಸಲಿದ್ದು, ಶಾಸಕ ಕೆ.ಜಿ. ಬೋಪಯ್ಯ ವೈದ್ಯಕೀಯ ಉಪಕರಣಗಳನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ದೀಪ ಪ್ರಜ್ವಲಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಮಾಜಿ ಸಚಿವ ಎಂ.ಸಿ. ನಾಣಯ್ಯ, ಬೃಂದಾವನ ಆಸ್ಪತ್ರೆಯ ಡಾ. ಮಾತಂಡ ಅಯ್ಯಪ್ಪ ಭಾಗವಹಿಸಲಿದ್ದು, ಅಶ್ವಿನಿ ಆಸ್ಪತ್ರೆಯ ಕಾರ್ಯದರ್ಶಿ ಜಿ. ರಾಜೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.