ಮಡಿಕೇರಿ, ಏ. 13: ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಕಾಂಗ್ರೆಸ್ ವರಿಷ್ಠರ ಪರ ಜಯಕಾರ ಹಾಕಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಪ್ರಮುಖರಾದ ಕೊಲ್ಯದ ಗಿರೀಶ್, ಪ್ರಕಾಶ್ ಆಚಾರ್ಯ, ವೆಂಕಟೇಶ್, ಪ್ರಭುರೈ, ಚುಮ್ಮಿ ದೇವಯ್ಯ, ಮೈನಾ, ಟಿ.ಹೆಚ್. ಉದಯಕುಮಾರ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಬಂಧಿಖಾನೆ ಸಲಹಾ ಸಮಿತಿ ಸದಸ್ಯ ಪುಷ್ಪಾ ಪೂಣಚ್ಚ, ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ರಾಜಾ ತಿಮ್ಮಯ್ಯ ಹಾಗೂ ಇನ್ನಿತರರು ಇದ್ದರು.
ವೀರಾಜಪೇಟೆ
ಇಲ್ಲಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ ಅವರ ನೇತೃತ್ವದಲ್ಲಿ ವೀರಾಜಪೇಟೆಯಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.
ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಗಡಿಯಾರ ಕಂಬ ಹಾಗೂ ಖಾಸಗಿ ಬಸ್ಸು ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸಿದರು.
ವಿಜಯೋತ್ಸವದಲ್ಲಿ ಆರ್.ಎಂ.ಸಿ.ಸದಸ್ಯ ಎಂ.ಕೆ.ಬೋಪಣ್ಣ, ಎಂ.ಎಸ್.ಪೂವಯ್ಯ, ಡಿ.ಸಿ.ಧ್ರುವ, ಬೆಲ್ಲು ಬೋಪಯ್ಯ, ನಗರ ಸಮಿತಿ ಅಧ್ಯಕ್ಷ ಜಿ.ಜಿ.ಮೋಹನ್, ಎಂ.ಎಂ.ಶಶಿಧರನ್, ಪಟ್ಟಣ ಪಂಚಾಯಿತಿ ನಾಮಕರಣ ಸದಸ್ಯರುಗಳಾದ ಮಹಮ್ಮದ್ ರಾಫಿ ಹಾಗೂ ಪಟ್ಟಡ ರಂಜಿ ಪೂಣಚ್ಚ, ಸಿಪಿ ಕಾವೇರಪ್ಪ ಮತ್ತಿತರರು ಹಾಜರಿದ್ದರು.
ಸುಂಟಿಕೊಪ್ಪ
ಕನ್ನಡ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭ ಗುಡ್ಡೆಹೊಸೂರು ಕ್ಷೇತ್ರದ ಜಿ.ಪಂ. ಸದಸ್ಯ ಪಿ.ಎಂ. ಲತೀಫ್, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಸದಸ್ಯರಾದ ರಜಾಕ್, ಸೋಮಯ್ಯ, ಶಿವಮ್ಮ, ಪರಿಶಿಷ್ಟ ಜಾತಿ ಅಧ್ಯಕ್ಷ ಎಂ.ಎಸ್.ರವಿ ಹಾಗೂ ಕಾರ್ಯಕರ್ತರು ಹಾಜರಿದ್ದರು.
ಮೂರ್ನಾಡು
ಮೂರ್ನಾಡು ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಪಕ್ಷದ ಬಾವುಟ ಹಿಡಿದು ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭ ಮೂರ್ನಾಡು ಕಾಂಗ್ರೆಸ್ ವಲಯ ಸಮಿತಿ ಅಧ್ಯಕ್ಷ ಮುಂಡಂಡ ಭಾಗೇಶ್ ಹಾಜರಿದ್ದರು.
ಕೂಡಿಗೆ
ಕೂಡಿಗೆ ಹಾಗೂ ಕೂಡುಮಂಗಳೂರಿನಲ್ಲಿ ಕಾಂಗ್ರೆಸ್‍ನ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡ ಟಿ.ಪಿ.ಹಮೀದ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ವಿ.ಸಣ್ಣಪ್ಪ, ಸದಸ್ಯ ಮಂಜುನಾಥ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.
ಸೋಮವಾರಪೇಟೆ
ಸೋಮವಾರಪೇಟೆಯಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ವರಿಷ್ಠರು, ಬ್ಲಾಕ್ ಕಾಂಗ್ರೆಸ್ ಮಾಜೀ ಅಧ್ಯಕ್ಷ ಕೆ.ಎಂ. ಲೋಕೇಶ್ ಪರವಾಗಿ ಜಯಕಾರ ಹಾಕಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಮುಖಂಡ ಹೆಚ್.ಸಿ. ನಾಗೇಶ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಹಾಗೂ ಜನಪರ ಯೋಜನೆಗಳಿಗೆ ಜನತೆ ಆಶೀರ್ವಾದ ಮಾಡಿದ್ದಾರೆ. ವಿರೋಧ ಪಕ್ಷಗಳ ನಿರಾಧಾರ ಆರೋಪಗಳಿಗೆ ಮತದಾನದ ಮೂಲಕ ಉತ್ತರ ನೀಡಿದ್ದಾರೆ ಎಂದರು.
ಈ ಸಂದರ್ಭ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಎ. ಲಾರೆನ್ಸ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಂದಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್, ವಿನು, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಸುರೇಶ್, ಹೆಚ್.ಎ. ನಾಗರಾಜ್, ಪ.ಪಂ. ಸದಸ್ಯರುಗಳಾದ ಕೆ.ಎ. ಆದಂ, ಶೀಲಾ ಡಿಸೋಜ, ಹೆತ್ತೂರು ರಾಜಣ್ಣ, ಇಂದ್ರೇಶ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
ನಾಪೆÇೀಕ್ಲು
ನಾಪೆÇೀಕ್ಲು ವಲಯ ಕಾಂಗ್ರೆಸ್ ವತಿಯಿಂದ ನಾಪೋಕ್ಲು ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಮಾಜಿ ಅಧ್ಯಕ್ಷ ಸಲೀಂ ಹಾರೀಸ್, ವಲಯ ಕಾಂಗ್ರೆಸ್ ಅಧ್ಯಕ್ಷ ಕುಶು ಕುಶಾಲಪ್ಪ ಗ್ರಾಮ ಪಂಚಾಯಿತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಕುಶಾಲನಗರ
ಕುಶಾಲನಗರ ಕಾಂಗ್ರೆಸ್ ಘಟಕದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಜಯಘೋಷಗಳನ್ನು ಕೂಗಿ ಸಂಭ್ರಮ ವ್ಯಕ್ತಪಡಿಸಿ ಪಟಾಕಿ ಸಿಡಿಸಿ ವಿಜಯೋತ್ಸವದಲ್ಲಿ ತೊಡಗಿಸಿಕೊಂಡರು.
ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಡಾ ಅಧ್ಯಕ್ಷ ಬಿ.ಜಿ.ಮಂಜುನಾಥ್, ಮಾಜಿ ಅಧ್ಯಕ್ಷ ಎಸ್.ಎನ್. ನರಸಿಂಹಮೂರ್ತಿ, ಪಟ್ಟಣ ಪಂಚಾಯಿತಿ ಸದಸ್ಯ ಹೆಚ್.ಜೆ. ಕರಿಯಪ್ಪ, ಶಿವಶಂಕರ, ಪ್ರಮೋದ್ ಮುತ್ತಪ್ಪ, ಪ್ರಮುಖ ಬಿ.ಎಸ್. ಚಂದ್ರಶೇಖರ್, ಅಬ್ದುಲ್ ಖಾದರ್, ಹರೀಶ್ ಮತ್ತಿತರ ಕಾರ್ಯಕರ್ತರು ಇದ್ದರು.