ಸೋಮವಾರಪೇಟೆ,ಏ.13: ತಾಲೂಕಿನ ವಿವಿಧ 10 ರಸ್ತೆಗಳ ಅಭಿವೃದ್ಧಿಗೆ ಲೋಕೋಪ ಯೋಗಿ ಇಲಾಖೆಯ ಮೂಲಕ ಒಟ್ಟು ರೂ. 15.35 ಕೋಟಿ ಅನುದಾನ ಬಿಡುಗಡೆ ಯಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.ಮಾದಾಪುರ-ಸೂರ್ಲಬ್ಬಿ-ಶಾಂತಳ್ಳಿ ರಸ್ತೆಯಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ 85 ಲಕ್ಷ, ಕಿರಗಂದೂರು-ಗುಬ್ಬನಮನೆ-ತಾಕೇರಿ-ಬಾರ್ಲಗದ್ದೆ, ಹರಗ ರಸ್ತೆಯಲ್ಲಿ ಸೇತುವೆ ನಿರ್ಮಾಣಕ್ಕೆ 70ಲಕ್ಷ, ಸುಂಟಿಕೊಪ್ಪ-ಚೆಟ್ಟಳ್ಳಿ ರಸ್ತೆ ಅಗಲೀಕರಣಕ್ಕೆ 3.50 ಕೋಟಿ, ಮಡಿಕೇರಿ ತಾಲೂಕಿನ ಚೆಟ್ಟಳ್ಳಿ ರಾಜ್ಯ ಹೆದ್ದಾರಿ 8ರ 137.14 ರಿಂದ 148ರವೆಗಿನ ರಸ್ತೆ ಅಭಿವೃದ್ಧಿಗೆ 6 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

(ಮೊದಲ ಪುಟದಿಂದ) ಇದರೊಂದಿಗೆ ಐಗೂರು-ಕಿರಗಂದೂರು-ಕೋಡಗದ್ದೆ-ತಾಕೇರಿ ರಸ್ತೆ ಅಭಿವೃದ್ಧಿಗೆ 30ಲಕ್ಷ, ಮಾದಾಪುರ-ಸೂರ್ಲಬ್ಬಿ-ಶಾಂತಳ್ಳಿ ರಸ್ತೆ ಅಭಿವೃದ್ದಿಗೆ 50 ಲಕ್ಷ, ಮಸಗೋಡು-ಯಲಕನೂರು-ಕಣಿವೆ ರಸ್ತೆಗೆ 1 ಕೋಟಿ, ಬ್ಯಾಡಗೊಟ್ಟ-ಮಲ್ಲಿಪಟ್ಟಣ ರಸ್ತೆ ಕಾಮಗಾರಿಗೆ 80ಲಕ್ಷ, ಕಾನನಕಾಡು-ಕೃಷ್ಣಾಪುರ-ವಾಲ್ನೂರು ರಸ್ತೆಗೆ 70 ಲಕ್ಷ ಮಂಜೂರಾಗಿದೆ ಎಂದು ತಿಳಿಸಿದ್ದಾರೆ. ಕಲ್ಕಂದೂರು-ಶಾಂತಳ್ಳಿ ರಸ್ತೆ ಅಭಿವೃದ್ಧಿಗೆ 1 ಕೋಟಿ ಅನುದಾನ ಸೇರಿದಂತೆ ಒಟ್ಟು 15.35 ಕೋಟಿ ಹಣ ಬಿಡುಗಡೆಯಾಗಿದ್ದು, ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಮೂಲಕ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.