ಸುಂಟಿಕೊಪ್ಪ: ಸುಂಟಿಕೊಪ್ಪ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಕಸ್ತೂರಿ ರಂಗನ್ ವರದಿಯ ಬಗ್ಗೆ ವಿಶೇಷ ಗ್ರಾಮಸಭೆ ನಡೆಯಿತು.
ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ ಮಾತನಾಡಿ, ಕಸ್ತೂರಿ ರಂಗನ್ ವರದಿಯು ಕೊಡಗಿನ ಮಟ್ಟಿಗೆ ಬಹಳಷ್ಟು ಮಾರಕವಾಗಿದೆ. ಈ ವರದಿಯ ಪ್ರಕಾರ ಯಾವದೇ ಕೈಗಾರಿಕಾ ಚಟುವಟಿಕೆಗಳನ್ನು ಮಾಡುವಂತಿಲ್ಲ. ಕೃಷಿ ಚಟುವಟಿಕೆ ಗಳಿಗೆ ಕೀಟನಾಶಕ ಗಳನ್ನು ಬಳಸುವಂತಿಲ್ಲ ಇಂತಹ ಪರಿಸ್ಥಿತಿ ಎದುರಾದರೆ ನಾವು ಬದುಕು ಸಾಗಿಸುವದಕ್ಕೂ ಸಾಧ್ಯವಿಲ್ಲ ದಾಗುತ್ತದೆ. ಆನೆಕಾಡುವಿಗೆ ಹೋಲಿಸಿದಾಗ ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳು ಈ ವ್ಯಾಪ್ತಿಗೆ ಸೇರುತ್ತವೆ ಎಂಬ ಆತಂಕ ತೋಡಿಕೊಂಡರು.
ಈ ವರದಿಯು ಕೇವಲ ಅರಣ್ಯ ಮತ್ತು ದೇವರಕಾಡುಗಳಿಗೆ ಸಂಬಂಧಿಸಿದ್ದರೆ ನಮ್ಮ ಅಭ್ಯಂತರವಿಲ್ಲ. ನಮ್ಮ ಜೀವನ ಸುಖಕರವಾಗಿರ ಬೇಕಾದರೆ ಈ ವರದಿಯನ್ನು ತಿರಸ್ಕರಿಸಲೇ ಬೇಕಾಗಿದೆ ಎಂದು ನಾಗರಿಕರಲ್ಲಿ ಮನವಿ ಮಾಡಿಕೊಂಡರು.
ಗ್ರಾಮ ಪಂಚಾಯಿತಿ ಸದಸ್ಯ ಕೆ.ಇ.ಕರೀಂ ಮಾತನಾಡಿ, , ಕಸ್ತೂರಿ ರಂಗನ್ ವರದಿ ಇಡೀ ಕೊಡಗಿಗೆ ತೊಂದರೆಯಾಗಿದೆ.ಅದು ಕೇವಲ ಅರಣ್ಯ ಪ್ರದೇಶಕ್ಕೆ ಮಾತ್ರ ಅನುಷ್ಠಾನಗೊಂಡರೆ ಜನ ಸಾಮಾನ್ಯರು ನೆಮ್ಮದಿಯಿಂದ ಇರಲು ಸಾಧ್ಯ. ಜನವಸತಿ ಪ್ರದೇಶ, ತೋಟ, ಗದ್ದೆಗಳನ್ನು ಈ ವರದಿಗೆ ಸೇರಿಸಿದರೆ ನಮ್ಮ ಬದುಕು ಬರಡಾಗುತ್ತದೆ ಎಂದರು. ಈ ವರದಿಯನ್ನು ಸುಂಟಿಕೊಪ್ಪದ ಗ್ರಾಮಸ್ಥರು ವಿರೋಧಿಸಿದರು ಪಂಚಾಯಿತಿ ನಿರ್ಣಯ ಕೈಗೊಂಡಿತು.
ವಿಶೇಷ ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಸದಸ್ಯರಾದ ಸಿ.ಚಂದ್ರ, ನಾಗರತ್ನ, ಶಾಹಿದ್, ಶಿವಮ್ಮಪ ನೋಡಲಾ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್, ಪಿಡಿಓ ಮೇದಪ್ಪ ಇತತರರು ಇದ್ದರು.
ಕರಿಕೆ: ಇಲ್ಲಿ ತಾ. 12 ರಂದು ಕರಿಕೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್ ಅಧ್ಯಕ್ಷತೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ವಿಶೇಷ ಗ್ರಾಮ ಸಭೆ ನಡೆಯಿತು. ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಹಾಗೂ ಅರಣ್ಯದಂಚಿನಲ್ಲಿರುವ ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿವಾಸಿಗಳಿಗೆ ತೊಂದರೆ ಉಂಟಾಗಲಿದೆ ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಕಸ್ತೂರಿ ರಂಗನ್ ವರದಿ ಬಗ್ಗೆ ವಿರೋಧ ನಿರ್ಣಯ ವನ್ನು ಕೈಗೊಳ್ಳಲಾಯಿತು. ನೋಡಲ್ ಅಧಿಕಾರಿ ಗಿರೀಶ್ ಅವರ ಉಪಸ್ಥಿತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ತಾ.ಪಂ ಸದಸ್ಯೆ ಕುಮಾರಿ ಸಂಧ್ಯಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೋಲಿ ಜಾರ್ಜ್ ಸದಸ್ಯರಾದ ಹರಿಪ್ರಸಾದ್, ಬಾಲಕೃಷ್ಣ, ಆಯುಷಾ, ರಾಜೇಶ್ವರಿ, ಪುರುಶೋತ್ತಮ್ ಪಂಚಾಯಿತಿ ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಸ್ವಾಗತಿಸಿ ವಂದಿಸಿದರು.
ಕೂಡಿಗೆ: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯ್ತಿಯಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ವಿಶೇಷ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷೆ ಲತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ಬಗ್ಗೆ ಚರ್ಚೆ ನಡೆಸಿ, ವರದಿಗೆ ವಿರೋಧ ವ್ಯಕ್ತಪಡಿಸ ಲಾಯಿತು. ಗ್ರಾ.ಪಂ. ಉಪಾಧ್ಯಕ್ಷೆ ಸರೋಜಮ್ಮ, ಸದಸ್ಯರುಗಳು ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಇದ್ದರು.
ಸೋಮವಾರಪೇಟೆ: ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸ ಲ್ಪಟ್ಟಿರುವ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಾರಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರು ಉದ್ದೇಶಿತ ವರದಿ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಟ್ಟದಳ್ಳಿ ಗ್ರಾ.ಪಂ. ಸಭಾಂಗಣ ದಲ್ಲಿ ಅಧ್ಯಕ್ಷೆ ಪವಿತ್ರ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಗ್ರಾಮಸಭೆಯಲ್ಲಿ ವರದಿ ಅನುಷ್ಠಾನದ ಬಗ್ಗೆ ವಿಸ್ತøತ ಚರ್ಚೆ ನಡೆದು, ಯಾವದೇ ಕಾರಣಕ್ಕೂ ಉದ್ದೇಶಿತ ಯೋಜನೆ ಯನ್ನು ಅನುಷ್ಠಾನಗೊಳಿಸಲು ಬಿಡಬಾರದು. ಇದನ್ನು ಮೀರಿ ಕ್ರಮಕ್ಕೆ ಮುಂದಾದರೆ ಉಗ್ರ ಹೋರಾಟ ನಡೆಸಲೇಬೇಕು ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯಲ್ಲಿನ ಅಂಶಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯು.ಎಂ. ತಮ್ಮಯ್ಯ ಅವರು ವಿವರಿಸಿದರು. ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ತಲತಲಾಂತರದಿಂದ ಬದುಕುತ್ತಿರುವ ನಾವುಗಳು ಪರಿಸರವನ್ನು ಸಂರಕ್ಷಿಸಿಕೊಂಡೇ ಬಂದಿದ್ದೇವೆ. ಇದೀಗ ವರದಿಯಲ್ಲಿನ ಅಂಶಗಳು ಜಾರಿಯಾದರೆ ಜೀವನಕ್ಕೆ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆ ವರದಿ ಜಾರಿಯನ್ನು ವಿರೋಧಿಸು ವದಾಗಿ ಬೆಟ್ಟದಳ್ಳಿ, ಕುಮಾರಳ್ಳಿ, ಕುಂದಳ್ಳಿ, ಕೊತ್ನಳ್ಳಿ ಗ್ರಾಮಸ್ಥರು ಹೇಳಿದರು.
ಸಭೆಯಲ್ಲಿ ಉಪಸ್ಥಿತರಿದ್ದ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಧರ್ಮಪ್ಪ ಮಾತನಾಡಿ, ಕಸ್ತೂರಿ ರಂಗನ್ ವರದಿ ಜಾರಿಯಿಂದ ಈ ವ್ಯಾಪ್ತಿಯ ಜನಜೀವನ ದುಸ್ತರವಾಗಲಿದೆ. ಈ ಹಿನ್ನೆಲೆ ಗ್ರಾಮಸ್ಥರು ಹಮ್ಮಿಕೊಳ್ಳುವ ಹೋರಾಟಕ್ಕೆ ಬೆಂಬಲ ಸೂಚಿಸುವದಾಗಿ ಘೋಷಿಸಿದರು.
ಕೊನೆಯಲ್ಲಿ ವರದಿಯನ್ನು ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂಬ ನಿರ್ಣಯವನ್ನು ಅಂಗೀಕರಿಸ ಲಾಯಿತು.
ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ವಿಸ್ತರಣಾಧಿಕಾರಿ ಸ್ವಾಮಿ, ಗ್ರಾ.ಪಂ. ಉಪಾಧ್ಯಕ್ಷೆ ಕುಮಾರಿ, ಸದಸ್ಯರು ಗಳಾದ ಎಸ್.ಕೆ. ಮಾಚಯ್ಯ, ಕೆ.ಎನ್. ಶಿವಣ್ಣ, ಎಸ್.ಡಿ. ಯೋಗೇಶ್, ಬಿ.ಎಲ್. ವಿಶಾಲಾಕ್ಷಿ, ಹೆಚ್.ಈ. ಸೀತಮ್ಮ, ಆರ್‍ಎಂಸಿ ಸದಸ್ಯ ಕೆ.ಕೆ. ಗೋಪಾಲ್ ಅವರುಗಳು ಉಪಸ್ಥಿತರಿದ್ದರು.
ಸಿದ್ದಾಪುರ: ಮಾಲ್ದಾರೆ ಗ್ರಾ.ಪಂ ಕಸ್ತೂರಿ ರಂಗನ್ ವರದಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಯಿತು.
ಮಾಲ್ದಾರೆ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಅಧ್ಯಕ್ಷೆ ರಾಣಿರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥ ನಂದಾ ಸುಬ್ಬಯ್ಯ ಮಾತನಾಡಿ, ಕಸ್ತೂರಿ ರಂಗನ್ ವರದಿಯನ್ನು ತಡೆಯುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯ ನೋಡಲ್ ಅಧಿಕಾರಿಯಾಗಿ ಸೆಸ್ಕ್ ಸಹಾಯಕ ಅಭಿಯಂತರರಾದ ಹೇಮಚಂದ್ರ, ಗ್ರಾ.ಪಂ ಉಪಾಧ್ಯಕ್ಷೆ ರಾಜು, ತಾ.ಪಂ ಸದಸ್ಯೆ ಚಿನ್ನಮ್ಮ, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.