ಮಡಿಕೇರಿ, ಏ. 12: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡುವ ಸಂಬಂಧ ಈಗಾಗಲೇ ಜಾರಿಗೊಳಿಸಲಾಗಿರುವ ಕೋಟ್ಪಾ (ಅಔಖಿPಂ) 2003ರ ಕಾಯಿದೆ ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ವಿಧಾನ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದು. ಧೂಮಪಾನ ಮಾಡುವದು ಕಂಡುಬಂದಲ್ಲಿ ದಂಡವನ್ನು ವಿಧಿಸಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಪೊಲೀಸ್, ಸಾರ್ವಜನಿಕ ಶಿಕ್ಷಣ, ಸ್ಥಳೀಯ ಸಂಸ್ಥೆಗಳು, ಪ್ರವಾಸೋದ್ಯಮ, ಕೆ.ಎಸ್.ಆರ್.ಟಿ.ಸಿ. ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಬಗ್ಗೆ ತಮ್ಮ ವ್ಯಾಪ್ತಿಯಲ್ಲಿ ಧೂಮಪಾನದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಒಳಗೊಂಡ ನಾಮ ಫಲಕವನ್ನು ಅಳವಡಿಸುವದು ಮತ್ತಿತರ ಕಾರ್ಯಗಳನ್ನು ನಿರ್ವಹಿಸಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ನಾಮಫಲಕ ಅಳವಡಿಸುವುದು, ಈ ಸಂಬಂಧ ಹೆದ್ದಾರಿ ಫಲಕಗಳನ್ನು ಬಳಸಿಕೊಂಡು ಸಾರ್ವಜನಿಕರಲ್ಲಿ
(ಮೊದಲ ಪುಟದಿಂದ) ಜಾಗೃತಿ ಮೂಡಿಸುವಂತಾಗಬೇಕು. ಕೋಟ್ಪಾ 2003ರ ಕಾಯಿದೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವದು ಎಲ್ಲಾ ಇಲಾಖೆಗಳ ಸಾಮಾಜಿಕ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ಎಂ.ಸತೀಶ್ ಕುಮಾರ್ ಹೇಳಿದರು.
ಈಗಾಗಲೇ ಧೂಮಪಾನ ನಿಷೇಧ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಸರ್ಕಾರದ ರಾಜಸ್ವ ಲೆಕ್ಕಶೀರ್ಷಿಕೆಗೆ ಜಮೆ ಮಾಡುವಂತಾಗಬೇಕು. ಸ್ಥಳೀಯ ಮಟ್ಟದಲ್ಲಿ ಧೂಮಪಾನ ನಿಷೇಧ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಆಯೋಜಿಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಪ್ರವಾಸಿ ಸ್ಥಳಗಳಲ್ಲಿ ಧೂಮಪಾನ ನಿಷೇಧ ಸಂಬಂಧಿಸಿದಂತೆ ನಾಮಫಲಕ ಅಳವಡಿಸುವ ಕಾರ್ಯವಾಗಬೇಕು. ನಗರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ವ್ಯಾಪಾರ ವಹಿವಾಟಿಗಾಗಿ ನೀಡಲಾಗುವ ಪರವಾನಿಗೆ ನೀಡುವ ಸಂದರ್ಭದಲ್ಲಿ ಕೋಟ್ಪಾ ಕಾಯಿದೆಯ ಅನುಷ್ಠಾನ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಅವರು ಮಾತನಾಡಿ ಎಲ್ಲರಿಗೂ ಪರಿಶುದ್ದ ಪರಿಸರದಲ್ಲಿ ಜೀವಿಸುವ ಹಕ್ಕಿದೆ ಅಲ್ಲದೇ ಸಾರ್ವಜನಿಕ ಪ್ರದೇಶಗಳ ಪರಿಸರಗಳನ್ನು ಕಾಪಾಡುವದು ನಮ್ಮ ಜವಾಬ್ದಾರಿಯಾಗಿದೆ. ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕಾನೂನು ಉಲ್ಲಂಘನೆಯಾಗಿದ್ದು ಶಾಲಾಕಾಲೇಜುಗಳು ಇದನ್ನು ಸೂಚಿಸುವ ಫಲಕಗಳನ್ನು ವಿದ್ಯಾಸಂಸ್ಥೆಗಳ ಆವರಣದ ಹೊರಗಡೆ ಅಳವಡಿಸುವದು ಕಡ್ಡಾಯವಾಗಿದ್ದು, ಉಲ್ಲಂಘನೆಯಾಗಿದ್ದಲ್ಲಿ ಸಂಭಂದಪಟ್ಟ ಅಧಿಕಾರಿಗಳು ಅಂತಹ ಮಾರಾಟ ಮಳಿಗೆಗಳನ್ನು ತೆರವುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕರಿಸಬೇಕೆಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಾದ ಬಸ್ ಸ್ಟ್ಯಾಂಡ್‍ಗಳು, ಪಾರ್ಕ್‍ಗಳು, ಹೊಟೇಲ್ ಹಾಗು ರೆಸ್ಟೊರೆಂಟ್‍ಗಳು, ಬೇಕರಿಗಳು, ಎಲ್ಲಾ ಅಂಗಡಿಮುಂಗಟ್ಟುಗಳು, ಸಿನಿಮಾ ಥಿಯೇಟರ್‍ಗಳು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಯ ಆವರಣಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಜಾರಿಗೊಳಿಸುವದು ಹಾಗೂ ಇದಕ್ಕೆ ಸಂಬಂಧಪಟ್ಟ ಫಲಕಗಳು ಅಳವಡಿಸಿರುವದನ್ನು ಖಾತ್ರಿ ಪಡಿಸುವದು. ಕಾನೂನು ಪ್ರಕಾರ ಮಾರಾಟ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಕುರಿತು ಸೂಚನಾ ಫಲಕಗಳನ್ನು ಪ್ರದರ್ಶಿಸುವದು ಕಡ್ಡಾಯವಾಗಿದ್ದು, ಹಾಕದಿದ್ದಲಿ ಸೂಕ್ತ ಕ್ರಮ ಕೈಗೊಳ್ಳುವದು ಅಗತ್ಯ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ ಅವರು ಶಾಲಾ, ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದು ಅವರು ಹೇಳಿದರು.
ತಂಬಾಕು ನಿಯಂತ್ರಣ ಘಟಕದ ರಾಜ್ಯ ಮಟ್ಟದ ಸಲಹೆಗಾರರಾದ ಪ್ರಭಾಕರ್ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕೋಟ್ಪಾ (ಅಔಖಿPಂ-2003) ಕಾಯ್ದೆ ಅಡಿಯಲ್ಲಿ ವಿವಿಧ ಇಲಾಖೆಗಳು ದಾಳಿ ನಡೆಸಿದ ಸಂದರ್ಭದಲ್ಲಿ ಸಂಗ್ರಹಿಸಿದ ದಂಡ ಹಣವನ್ನು ರಾಜಸ್ವ ಲೆಕ್ಕಶೀರ್ಷಿಕೆ 0055-00-103-0-05 ಗೆ ಜಮಾ ಮಾಡಬೇಕಿದೆ ಎಂದರು. ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಡಾ.ಹನುಮಂತಪ್ಪ ಅವರು ಕೋಟ್ಪಾ ಕಾಯಿದೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ವೇಕ್ಷಣಾ ಅಧಿಕಾರಿ ಡಾ.ಶಿವಕುಮಾರ್ ಅವರು ಧೂಮಪಾನದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಡಿವೈಎಸ್‍ಪಿ ಛಬ್ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಅಬ್ದುಲ್ ಅಜೀಜ್, ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕಾಮತ್, ಜಿಲ್ಲಾ ಆಸ್ಪತ್ರೆಯ ಡಾ.ಮಂಜುನಾಥ್ ಪ್ರಸಾದ್, ಇನ್ಸ್‍ಪೆಕ್ಟರ್ ಮೇದಪ್ಪ, ಭರತ್, ಕೆಎಸ್‍ಆರ್‍ಟಿಸಿ ಟ್ರಾಫಿಕ್ ಇನ್ಸ್‍ಪೆಕ್ಟರ್ ಈರಸಪ್ಪ, ಕಾರ್ಮಿಕ ಇಲಾಖೆಯ ಅಧಿಕಾರಿ ಯತ್ನಟ್ಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ವೇಕ್ಷಣಾ ಘಟಕದ ಮಂಜುನಾಥ್, ಉಮೇಶ್ ಇತರರು ಇದ್ದರು.
ಪ್ರಗತಿ ಪರಿಶೀಲನಾ ಸಭೆಯ ನಂತರ ನಡೆದ ಕಾರ್ಯಾಗಾರದ ಸಂಪನ್ಮೂಲಾಧಿಕಾರಿಗಳಾಗಿ ಭಾಗವಹಿಸಿದ್ದ ರಾಜ್ಯ ತಂಬಾಕು ನಿಯಂತ್ರಣ ಘಟಕದ ತಂಬಾಕು ನಿಯಂತ್ರಣ ಯೋಜನೆಯ ಸಂಯೋಜನಾಧಿಕಾರಿ ಪ್ರಭಾಕರ್, ರಾಜ್ಯ ತಂಬಾಕು ನಿಯಂತ್ರಣದ ಉನ್ನತ ಮಟ್ಟದ ಸಮಿತಿಯ ವತಿಯಿಂದ ಡಾ.ಚಂದ್ರಶೇಖರ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಡಾ.ಹನುಮಂತರಾಯಪ್ಪ ತಂಬಾಕಿನಿಂದಾಗಿ ಮಾನವನ ಆರೋಗ್ಯ ಮತ್ತು ಸರ್ಕಾರಗಳ ಬೊಕ್ಕಸಕ್ಕೆ ಉಂಟಾಗುತ್ತಿರುವ ಹೊರೆಯ ಬಗ್ಗೆ ಅರಿವು ಮೂಡಿಸಿದರು. ಅಲ್ಲದೇ ಕೋಟಾ-2003 (ತಂಬಾಕು ನಿಯಂತ್ರಣ ಕಾಯ್ದೆ)ಯ ಬಗ್ಗೆ ಅಧಿಕಾರಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರಲ್ಲದೇ, ಸರ್ಕಾರದ ವತಿಯಿಂದ ತಂಬಾಕು ನಿಯಂತ್ರಣದ ಉದ್ದೇಶದಿಂದ ಅಭಿವೃದ್ದಿ ಪಡಿಸಿರುವ ವೆಬ್‍ಸೈಟ್ (ತಿತಿತಿ.ಛಿoಣಠಿಚಿ.ಞಚಿಡಿ.ಟಿiಛಿ.iಟಿ) ನ ಕುರಿತು ಅಧಿಕಾರಿಗಳಿಗೆ ಹೆಚ್ಚಿನ ಮಾಹಿತಿ ನೀಡಿದರಲ್ಲದೇ ಪ್ರತಿ ತಿಂಗಳು ನಿಯಮಿತವಾಗಿ ಹೇಗೆ ವರದಿ ನೀಡಬೇಕೆಂಬದರ ಕುರಿತು ಮಾಹಿತಿ ನೀಡಿದರು.