ಸಿದ್ದಾಪುರ, ಏ. 12: ಮೂರ್ನಾಡು ಗೌತಮ್ ಫ್ರೆಂಡ್ಸ್ ವತಿಯಿಂದ ಅಯೋಜಿಸಲಾದ ಕೊಡಗು ಪ್ರೀಮಿಯರ್ ಲೀಗ್ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ ಸಂಕೇತ್ ಪೂವಯ್ಯ, ರಾಜ್ಯ ಐ.ಎನ್.ಟಿ.ಯು.ಸಿ. ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಸಂಘದ ಅಧ್ಯಕ್ಷ ಬಲ್ಲಚಂಡ ಗೌತಮ್ ಅಧ್ಯಕ್ಷತೆ ವಹಿಸಿದ್ದರು. ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್, ರಸ್ತೆ ಸಾರಿಗೆ ನಿಗಮದ ನಿರ್ದೇಶಕ ಸೌಕತ್ ಅಲಿ, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಹಂಸ, ಕಕ್ಕಬೆ ಗ್ರಾಮ ಪಂಚಾಯಿತಿ ಸದಸ್ಯ ನಾಸೀರ್ ಮಕ್ಕಿ, ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಪೊನ್ನು ಮುತ್ತಪ್ಪ, ಐ.ಎನ್.ಟಿ. ಯು.ಸಿ. ಜಿಲ್ಲಾಧ್ಯಕ್ಷ ಹಮೀದ್, ಸ್ಥಳೀಯರಾದ ಕಾರ್ಯಪ್ಪ, ಸಂಘದ ಕಾರ್ಯದರ್ಶಿ ಅಬ್ದುಲ್ ರೆಹಮಾನ್ (ಅಂದಾಯಿ) ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.